ಪ್ರಧಾನ ಮಂತ್ರಿಯವರ ಕಛೇರಿ
ಸಿಕಂದರಾಬಾದ್ ಮತ್ತು ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಶೇಷವಾಗಿ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ: ಪ್ರಧಾನಮಂತ್ರಿ
प्रविष्टि तिथि:
07 APR 2023 11:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಹೆಮ್ಮೆ, ಸೌಕರ್ಯ ಮತ್ತು ಸಂಪರ್ಕಕ್ಕೆ ಸಮಾನಾರ್ಥಕವಾಗಿದೆ ಎಂದು ಹೇಳಿದ್ದಾರೆ.
ಸಿಕಂದರಾಬಾದ್ ಮತ್ತು ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಶ್ರೀ ಮೋದಿ ಅವರು ಚಾಲನೆ ನೀಡಿದ ಕುರಿತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿ ಅವರ ಟ್ವೀಟ್ ಅನ್ನು ಹಂಚಿಕೊಂಡು, ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:
"ವಂದೇ ಭಾರತ್ ಎಕ್ಸ್‌ಪ್ರೆಸ್ ಹೆಮ್ಮೆ, ಸೌಕರ್ಯ ಮತ್ತು ಸಂಪರ್ಕಕ್ಕೆ ಸಮಾನಾರ್ಥಕವಾಗಿದೆ. ಸಿಕಂದರಾಬಾದ್ ಮತ್ತು ತಿರುಪತಿ ನಡುವಿನ ಈ ರೈಲು ಪ್ರವಾಸೋದ್ಯಮಕ್ಕೆ, ವಿಶೇಷವಾಗಿ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಇದು ಆರ್ಥಿಕ ಬೆಳವಣಿಗೆಯನ್ನೂ ಹೆಚ್ಚಿಸುತ್ತದೆ."
*****
(रिलीज़ आईडी: 2188139)
आगंतुक पटल : 20
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam