ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ

प्रविष्टि तिथि: 08 APR 2023 5:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪರಿಶೀಲಿಸಿದರು ಮತ್ತು ಮಕ್ಕಳು ಹಾಗೂ ರೈಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಸಿಕಂದರಾಬಾದ್ ಮತ್ತು ತಿರುಪತಿ ನಡುವಿನ ಸಂಪರ್ಕವನ್ನು ಹೆಚ್ಚಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಾಯಿತು. ಈ ರೈಲಿಗಾಗಿ ನಾನು ತೆಲಂಗಾಣ ಮತ್ತು ಆಂಧ್ರಪ್ರದೇಶದ ಜನರನ್ನು ಅಭಿನಂದಿಸುತ್ತೇನೆ."

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಐಟಿ ನಗರವಾದ ಹೈದರಾಬಾದ್ ಅನ್ನು ಭಗವಾನ್ ವೆಂಕಟೇಶ್ವರನ ನೆಲೆಯಾದ ತಿರುಪತಿ ಯೊಂದಿಗೆ ಸಂಪರ್ಕಿಸುವ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್, ಕೇವಲ ಮೂರು ತಿಂಗಳ ಅಲ್ಪಾವಧಿಯಲ್ಲಿ ತೆಲಂಗಾಣದಿಂದ ಪ್ರಾರಂಭಿಸಲಾದ ಎರಡನೇ ವಂದೇ ಭಾರತ್ ರೈಲು ಇದಾಗಿದೆ. ಈ ರೈಲು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರುವರೆ ಗಂಟೆಗಳಷ್ಟು ಕಡಿಮೆ ಮಾಡಲಿದ್ದು, ವಿಶೇಷವಾಗಿ ತೀರ್ಥಯಾತ್ರಿಗಳಿಗೆ ಪ್ರಯೋಜನಕಾರಿಯಾಗಲಿದೆ.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರಿಗೆ ತೆಲಂಗಾಣದ ರಾಜ್ಯಪಾಲರಾದ ಡಾ. ತಮಿಳಿಸಾಯಿ ಸೌಂದರರಾಜನ್, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರು ಸಾಥ್ ನೀಡಿದರು.

 

*****

 


(रिलीज़ आईडी: 2188208) आगंतुक पटल : 18
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu