ಪ್ರಧಾನ ಮಂತ್ರಿಯವರ ಕಛೇರಿ
ಸಿಬಿಐನ ವಜ್ರ ಮಹೋತ್ಸವ ಸಮಾರಂಭವನ್ನು ಏಪ್ರಿಲ್ 3 ರಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
ಪ್ರಧಾನಮಂತ್ರಿ ಅವರಿಂದ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಸಿಬಿಐನ ಅತ್ಯುತ್ತಮ ತನಿಖಾ ಅಧಿಕಾರಿಗಳಿಗೆ ಚಿನ್ನದ ಪದಕ ಪ್ರದಾನ
ಸಿಬಿಐನ ವಜ್ರ ಮಹೋತ್ಸವದ ನೆನಪಿಗಾಗಿ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯ ಬಿಡುಗಡೆ
प्रविष्टि तिथि:
02 APR 2023 9:48AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 3 ರಂದು ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ ವಜ್ರ ಮಹೋತ್ಸವದ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಸಂದರ್ಭದಲ್ಲಿ, ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಸಿಬಿಐನ ಅತ್ಯುತ್ತಮ ತನಿಖಾ ಅಧಿಕಾರಿಗಳಿಗೆ ಚಿನ್ನದ ಪದಕ ಪುರಸ್ಕೃತರಿಗೆ ಪದಕ ಪ್ರದಾನ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪ್ರಶಸ್ತಿ ವಿಜೇತರಿಗೆ ಪದಕಗಳನ್ನು ಪ್ರದಾನ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಸಿಬಿಐನ ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಕಚೇರಿ ಸಂಕೀರ್ಣಗಳನ್ನು ಸಹ ಉದ್ಘಾಟಿಸಲಿದ್ದಾರೆ. ಅವರು ಸಿಬಿಐನ ವಜ್ರ ಮಹೋತ್ಸವದ ನೆನಪಿಗಾಗಿ ಒಂದು ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಜೊತೆಗೆ, ಅವರು ಸಿಬಿಐನ ಟ್ವಿಟ್ಟರ್ ಹ್ಯಾಂಡಲ್ ಅನ್ನು ಸಹ ಪ್ರಾರಂಭಿಸಲಿದ್ದಾರೆ.
ಕೇಂದ್ರೀಯ ತನಿಖಾ ದಳವನ್ನು ಭಾರತ ಸರ್ಕಾರದ ಗೃಹ ಸಚಿವಾಲಯದ ನಿರ್ಣಯದ ಮೂಲಕ 1963ರ ಏಪ್ರಿಲ್ 1 ರಂದು ಸ್ಥಾಪಿಸಲಾಯಿತು.
*****
(रिलीज़ आईडी: 2188271)
आगंतुक पटल : 11
इस विज्ञप्ति को इन भाषाओं में पढ़ें:
Marathi
,
Assamese
,
English
,
Urdu
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam