ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೌರ ಶಕ್ತಿಯ ಸದ್ಬಳಕೆಗಾಗಿ ಗೋವಾ ಸೌರ ರೂಫ್‌ಟಾಪ್ ಪೋರ್ಟಲ್‌ಗೆ ಪ್ರಧಾನಮಂತ್ರಿ ಪ್ರಶಂಸೆ

ಪ್ರಕಟಣಾ ದಿನಾಂಕ: 02 APR 2023 9:03AM by PIB Bengaluru

ಸೌರ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಮುಂದುವರೆಸುವ ನಿಟ್ಟಿನಲ್ಲಿ ಗೋವಾ ಸೌರ ರೂಫ್‌ಟಾಪ್ ಪೋರ್ಟಲ್ goasolar.in ಉತ್ತಮ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಗೋವಾ ಇಂಧನ ಅಭಿವೃದ್ಧಿ ಸಂಸ್ಥೆ ಇದನ್ನು ನವೀಕರಿಸಬಹುದಾದ ಇಂಧನ ಮತ್ತು ವಿದ್ಯುತ್ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.

ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರ ಟ್ವೀಟ್ ಸರಣಿಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ಸೌರ ಶಕ್ತಿಯನ್ನು ಬಳಸಿಕೊಳ್ಳುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಮುಂದುವರೆಸುವ ನಿಟ್ಟಿನಲ್ಲಿ ಉತ್ತಮ ಹೆಜ್ಜೆ."

 

*****


(ಪ್ರಕಟಣೆ ಐ.ಡಿ.: 2188283) ವಿಸಿಟರ್ ಕೌಂಟರ್ : 39