ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಾಖಲೆಯ ರಕ್ಷಣಾ ರಫ್ತು ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ಲಾಘನೆ

ಪ್ರಕಟಣಾ ದಿನಾಂಕ: 01 APR 2023 9:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022-2023ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತುಗಳು ₹15,920 ಕೋಟಿಗಳ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ ಎಂಬುದನ್ನು ಶ್ಲಾಘಿಸಿದ್ದಾರೆ.

ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರ ಘೋಷಣೆಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ:

"ಅದ್ಭುತ! ಇದು ಭಾರತದ ಪ್ರತಿಭೆ ಮತ್ತು 'ಮೇಕ್ ಇನ್ ಇಂಡಿಯಾ' ಕಡೆಗಿನ ಉತ್ಸಾಹದ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವಲಯದಲ್ಲಿ ಕೈಗೊಂಡ ಸುಧಾರಣೆಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತಿವೆ ಎಂಬುದನ್ನು ಇದು ತೋರಿಸುತ್ತದೆ. ಭಾರತವನ್ನು ರಕ್ಷಣಾ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ನಮ್ಮ ಸರ್ಕಾರವು ಪ್ರಯತ್ನಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತದೆ."

 

*****


(ಪ್ರಕಟಣೆ ಐ.ಡಿ.: 2188305) ವಿಸಿಟರ್ ಕೌಂಟರ್ : 30