ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚೆನ್ನೈ ವಿಮಾನ ನಿಲ್ದಾಣದ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

Posted On: 08 APR 2023 6:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿರುವ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು (ಹಂತ-1) ಉದ್ಘಾಟಿಸಿದರು. ಅವರು ಹೊಸ ಸೌಲಭ್ಯದ ಸುತ್ತ ಸಂಚರಿಸಿ ಪರಿಶೀಲಿಸಿದರು.

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ಚೆನ್ನೈ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಈ ಮಹಾನ್ ನಗರದ ಮತ್ತು ತಮಿಳುನಾಡಿನಾದ್ಯಂತದ ಜನರಿಗೆ ಬಹಳಷ್ಟು ಸಹಾಯ ಮಾಡಲಿದೆ. ಟರ್ಮಿನಲ್ ಕಟ್ಟಡವು ತಮಿಳುನಾಡಿನ ಶ್ರೀಮಂತ ಸಂಸ್ಕೃತಿಯ ಸ್ಪರ್ಶವನ್ನು ಸಹ ಹೊಂದಿದೆ."

₹ 1260 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಈ ಹೊಸ ಸಮಗ್ರ ಟರ್ಮಿನಲ್ ಕಟ್ಟಡದ ಸೇರ್ಪಡೆಯು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ವಾರ್ಷಿಕ 23 ಮಿಲಿಯನ್ ಪ್ರಯಾಣಿಕರಿಂದ (MPPA) 30 MPPA ಗೆ ಹೆಚ್ಚಿಸಲಿದೆ. ಹೊಸ ಟರ್ಮಿನಲ್ ಸ್ಥಳೀಯ ತಮಿಳು ಸಂಸ್ಕೃತಿಯನ್ನು ಆಕರ್ಷಕವಾಗಿ ಪ್ರತಿಬಿಂಬಿಸುತ್ತದೆ. ಇದು ಕೋಲಂ, ಸೀರೆ, ದೇವಾಲಯಗಳು ಮತ್ತು ನೈಸರ್ಗಿಕ ಪರಿಸರವನ್ನು ಎತ್ತಿ ತೋರಿಸುವ ಇತರ ಅಂಶಗಳಂತಹ ಸಾಂಪ್ರದಾಯಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಜೊತೆಗೆ ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ. ಕೆ. ಸ್ಟಾಲಿನ್, ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಶ್ರೀ ಎಲ್. ಮುರುಗನ್ ಉಪಸ್ಥಿತರಿದ್ದರು.

 

*****

 


(Release ID: 2188386) Visitor Counter : 5