ಪ್ರಧಾನ ಮಂತ್ರಿಯವರ ಕಛೇರಿ
ಜಲ ಜೀವನ್ ಮಿಷನ್‌ನಲ್ಲಿ ಶೇ 75ರಷ್ಟು ಸಾಧನೆಗಾಗಿ ಅರುಣಾಚಲ ಪ್ರದೇಶಕ್ಕೆ ಪ್ರಧಾನಮಂತ್ರಿ ಅಭಿನಂದನೆ
Posted On:
02 APR 2023 9:15AM by PIB Bengaluru
ಜಲ ಜೀವನ್ ಮಿಷನ್ ಅಡಿಯಲ್ಲಿ ಅರುಣಾಚಲ ಪ್ರದೇಶವು ಶೇ 75ರಷ್ಟು ವ್ಯಾಪ್ತಿಯನ್ನು ದಾಟಿ, 1.73 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಕುಡಿಯುವ ನೀರನ್ನು ಒದಗಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಅಭಿನಂದಿಸಿದ್ದಾರೆ.
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಅವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿನ ಕಷ್ಟಕರವಾದ ಭೂಪ್ರದೇಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಅಮೃತ ಮಹೋತ್ಸವದ ಈ ಸಮಯದಲ್ಲಿ ಶೇ 75ರಷ್ಟು ವ್ಯಾಪ್ತಿಯನ್ನು ಸಾಧಿಸಿರುವುದು ಶ್ಲಾಘನೀಯ. ಇದನ್ನು ಸಾಧಿಸಿದ ತಂಡಕ್ಕೆ ಅಭಿನಂದನೆಗಳು ಮತ್ತು ಉಳಿದ ಭಾಗವನ್ನು ಪೂರ್ಣಗೊಳಿಸಲು ಶುಭಾಶಯಗಳು."
*****
(Release ID: 2188730)
Visitor Counter : 4
Read this release in:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam