ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ದೆಹಲಿ ಸ್ಫೋಟದ ಕುರಿತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿದರು


ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲಾಗುವುದು: ಅಮಿತ್ ಶಾ

Posted On: 11 NOV 2025 6:57PM by PIB Bengaluru

ದೆಹಲಿ ಕಾರು ಸ್ಫೋಟ ಘಟನೆಯ ಕುರಿತು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು, ನವದೆಹಲಿಯಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿದರು.

ಮೊದಲ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರು ಮತ್ತು ದೆಹಲಿ ಪೊಲೀಸ್ ಆಯುಕ್ತರು ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಮಹಾನಿರ್ದೇಶಕರು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದರು. ಎರಡನೇ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ರಾಷ್ಟ್ರೀಯ ಭದ್ರತಾ ಪಡೆಗಳ (ಎನ್.ಎಸ್.ಜಿ) ಮಹಾನಿರ್ದೇಶಕರು, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್.ಐ.ಎ) ಮಹಾನಿರ್ದೇಶಕರು, ವಿಧಿವಿಜ್ಞಾನ ಸೇವೆಗಳ ಮಹಾನಿರ್ದೇಶಕರು, ದೆಹಲಿಯ ವಿಧಿವಿಜ್ಞಾನ ಪ್ರಯೋಗಾಲಯದ ಮುಖ್ಯ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

“ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. ಈ ಘಟನೆಯ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅವರಿಗೆ ಸೂಚನೆ ನೀಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ನಮ್ಮ ಏಜೆನ್ಸಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.” ಎಂದು ಸಭೆಯ ನಂತರ, ಕೇಂದ್ರ ಗೃಹ ಸಚಿವರು ತಮ್ಮ ಎಕ್ಸ್‌ ಖಾತೆಯ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

 

****


(Release ID: 2188976) Visitor Counter : 6