ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 1500 ಮೀ. ಟಿ-20 ಸ್ಪರ್ಧೆಯಲ್ಲಿ ಕಂಚು ಗೆದ್ದ ಪೂಜಾಗೆ ಪ್ರಧಾನಮಂತ್ರಿ ಅಭಿನಂದನೆ

Posted On: 28 OCT 2023 8:35PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 1500 ಮೀಟರ್ ಟಿ-20 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅವರು ಪೂಜಾ ಅವರ ಧೈರ್ಯ ಮತ್ತು ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು 'ಎಕ್ಸ್' (X) ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 1500 ಮೀಟರ್ ಟಿ-20 ಸ್ಪರ್ಧೆಯಲ್ಲಿ ಪೂಜಾ ಅವರಿಗೆ ಇದು ಅತ್ಯುತ್ತಮ ಕಂಚಿನ ಪದಕ!

ಪೂಜಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಧೈರ್ಯ ಮತ್ತು ನಂಬಲಸಾಧ್ಯ ಪ್ರದರ್ಶನ ಈ ಯಶಸ್ಸಿಗೆ ಕಾರಣವಾಗಿದೆ."

 

*****


(Release ID: 2189197) Visitor Counter : 5