ಪ್ರಧಾನ ಮಂತ್ರಿಯವರ ಕಛೇರಿ
ಐಎನ್‍ಎಸ್ ಇಂಫಾಲ್ ನೌಕಾಪಡೆಗೆ ಸೇರ್ಪಡೆಯಾಗಿದ್ದು ಭಾರತಕ್ಕೆ ಹೆಮ್ಮೆಯ ಕ್ಷಣ: ಪ್ರಧಾನಮಂತ್ರಿ
Posted On:
26 DEC 2023 9:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಎನ್ ಎಸ್ ಇಂಫಾಲ್ ಭಾರತೀಯ ನೌಕಾಪಡೆಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಆತ್ಮನಿರ್ಭರತೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಐಎನ್‍ಎಸ್ ಇಂಫಾಲ್ ನಮ್ಮ ನೌಕಾಪಡೆಗೆ ಸೇರ್ಪಡೆಯಾಗಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ಇದು ರಕ್ಷಣೆಯಲ್ಲಿ ಭಾರತದ ಹೆಚ್ಚುತ್ತಿರುವ ಸ್ವಾವಲಂಬನೆಗೆ ಸಾಕ್ಷಿಯಾಗಿದೆ. ಇದು ನಮ್ಮ ನೌಕಾ ಶ್ರೇಷ್ಠತೆ ಮತ್ತು ಎಂಜಿನಿಯರಿಂಗ್ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಈ 'ಆತ್ಮನಿರ್ಭರತೆ'ಯ ಮೈಲಿಗಲ್ಲಿನಲ್ಲಿ ತೊಡಗಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು. ನಾವು ನಮ್ಮ ಸಮುದ್ರಗಳನ್ನು ಸುರಕ್ಷಿತವಾಗಿಡಲು ಮತ್ತು ನಮ್ಮ ರಾಷ್ಟ್ರವನ್ನು ಬಲಪಡಿಸಲು ಶ್ರಮಿಸುತ್ತೇವೆ."
*****
(Release ID: 2189594)
Visitor Counter : 7