ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ
प्रविष्टि तिथि:
20 NOV 2025 1:41PM by PIB Bengaluru
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಬಿಹಾರದ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದ್ದಾರೆ. ಜನರಿಗೆ ಸೇವೆ ಸಲ್ಲಿಸುವಲ್ಲಿ ಇಬ್ಬರೂ ನಾಯಕರು ತಳಮಟ್ಟದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ ಹಾಗೂ ಅವರುಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿ ಶಿಖರದ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಮರ್ಪಿತ ನಾಯಕರನ್ನು ಹೊಂದಿರುವ ಅದ್ಭುತ ತಂಡ ಇದಾಗಿದೆ ಎಂದು ಅವರು ಹೇಳಿದರು ಮತ್ತು ಅವರಿಗೆ ಶುಭ ಹಾರೈಸಿದರು.
ಎಕ್ಸ್ ತಾಣದ ಸರಣಿ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;
“श्री नीतीश कुमार जी को बिहार के मुख्यमंत्री पद की शपथ लेने पर बहुत-बहुत बधाई। वे एक कुशल और अनुभवी प्रशासक हैं। राज्य में सुशासन का उनका शानदार ट्रैक रिकॉर्ड रहा है। नए कार्यकाल के लिए उन्हें मेरी हार्दिक शुभकामनाएं!
@NitishKumar”
“श्री सम्राट चौधरी जी और श्री विजय सिन्हा जी को बिहार के उप मुख्यमंत्री बनने पर ढेरों बधाई। जमीनी स्तर पर दोनों नेताओं के पास जनसेवा का लंबा अनुभव है। उन्हें भी मेरी बहुत-बहुत शुभकामनाएं!
@samrat4bjp
@VijayKrSinhaBih”
“बिहार सरकार में मंत्रियों के रूप में शपथ लेने वाले सभी साथियों को मेरी हार्दिक बधाई। समर्पित नेताओं की यह एक ऐसी शानदार टीम है, जो बिहार को नई ऊंचाइयों पर ले जाएगी। उन सभी को मेरी ढेरों शुभकामनाएं!”
"ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ಅವರು ಹಲವು ವರ್ಷಗಳ ಕಾಲ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ. ಅವರ ಮುಂದಿನ ಅವಧಿಗೆ ನನ್ನ ಶುಭಾಶಯಗಳು.
@NitishKumar"
"ಬಿಹಾರದ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಶ್ರೀ ಸಾಮ್ರಾಟ್ ಚೌಧರಿ ಜಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರಿಗೆ ಅಭಿನಂದನೆಗಳು. ಇಬ್ಬರೂ ನಾಯಕರು ಜನರಿಗೆ ಸೇವೆ ಸಲ್ಲಿಸುವಲ್ಲಿ ತಳಮಟ್ಟದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಅವರಿಗೆ ನನ್ನ ಶುಭಾಶಯಗಳು.
@samrat4bjp
@VijayKrSinhaBih"
"ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ನನ್ನ ಶುಭಾಶಯಗಳು. ಇದು ಅದ್ಭುತ ತಂಡವಾಗಿದ್ದು, ಬಿಹಾರವನ್ನು ಅಭಿವೃದ್ಧಿಯ ಶಿಖರದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಮರ್ಪಿತ ನಾಯಕರನ್ನು ಹೊಂದಿದೆ. ಅವರಿಗೆ ನಾನು ಶುಭ ಹಾರೈಸುತ್ತೇನೆ."
*****
(रिलीज़ आईडी: 2192120)
आगंतुक पटल : 5
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Gujarati
,
Odia
,
Telugu
,
Malayalam