ಪ್ರಧಾನ ಮಂತ್ರಿಯವರ ಕಛೇರಿ
ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
ಇದು ಸ್ವಾತಂತ್ರ್ಯಾನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿಒಂದಾಗಿದೆ ಮತ್ತು ಸುಗಮ ವ್ಯಾಪಾರವನ್ನು ಉತ್ತೇಜಿಸುತ್ತದೆ: ಪ್ರಧಾನಮಂತ್ರಿ
ಈ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆಗೆ ಬಲವಾದ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತವೆ: ಪ್ರಧಾನಮಂತ್ರಿ
ಇದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಭಾರತದ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತದೆ: ಪ್ರಧಾನಮಂತ್ರಿ
ಈ ಸುಧಾರಣೆಗಳು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತವೆ, ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ವಿಕಸಿತ ಭಾರತದತ್ತ ನಮ್ಮ ಪ್ರಯಾಣವನ್ನು ವೇಗಗೊಳಿಸುತ್ತವೆ: ಪ್ರಧಾನಮಂತ್ರಿ
Posted On:
21 NOV 2025 5:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ್ದಾರೆ. ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಈ ಸುಧಾರಣೆಗಳು ಕಾರ್ಮಿಕರನ್ನು ಹೆಚ್ಚು ಸಬಲೀಕರಣಗೊಳಿಸುತ್ತವೆ ಮತ್ತು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತವೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು.
ನಾಲ್ಕು ಕಾರ್ಮಿಕ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, ಸುರಕ್ಷಿತ ಕೆಲಸದ ಸ್ಥಳಗಳು ಮತ್ತು ಜನರಿಗೆ, ವಿಶೇಷವಾಗಿ ನಾರಿ ಶಕ್ತಿ ಮತ್ತು ಯುವ ಶಕ್ತಿಗೆ ಲಾಭದಾಯಕ ಅವಕಾಶಗಳಿಗೆ ಬಲವಾದ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು.
ಸುಧಾರಣೆಗಳು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಭಾರತದ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅವು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತವೆ, ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ವಿಕಸಿತ ಭಾರತದತ್ತ ರಾಷ್ಟ್ರದ ಪ್ರಯಾಣವನ್ನು ವೇಗಗೊಳಿಸುತ್ತವೆ ಎಂದು ಅವರು ಹೇಳಿದರು.
ಸರಣಿ ಪೋಸ್ಟ್‌ನಲ್ಲಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;
“ಶ್ರಮೇವ ಜಯತೆ!
ಇಂದು, ನಮ್ಮ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದು ಸ್ವಾತಂತ್ರ್ಯಾನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿಒಂದಾಗಿದೆ. ಇದು ನಮ್ಮ ಕಾರ್ಮಿಕರನ್ನು ಹೆಚ್ಚು ಸಶಕ್ತಗೊಳಿಸುತ್ತದೆ. ಇದು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತದೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತದೆ.
# ಶ್ರಮೇವ ಜಯತೆ
# ಶ್ರಮೇವ ಜಯತೆ
https://www.pib.gov.in/PressReleseDetailm.aspx?PRID=2192463”
“ಈ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, ಸುರಕ್ಷಿತ ಕೆಲಸದ ಸ್ಥಳಗಳು ಮತ್ತು ನಮ್ಮ ಜನರಿಗೆ, ವಿಶೇಷವಾಗಿ ನಾರಿ ಶಕ್ತಿ ಮತ್ತು ಯುವ ಶಕ್ತಿಗೆ ಲಾಭದಾಯಕ ಅವಕಾಶಗಳಿಗೆ ಬಲವಾದ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತವೆ.”
“ಇದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಭಾರತದ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತದೆ. ಈ ಸುಧಾರಣೆಗಳು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತವೆ, ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ವಿಕಸಿತ ಭಾರತದತ್ತ ನಮ್ಮ ಪ್ರಯಾಣವನ್ನು ವೇಗಗೊಳಿಸುತ್ತವೆ.”
“श्रमेव जयते!
आज मेरे श्रमिक भाई-बहनों के लिए एक ऐतिहासिक दिन है। हमारी सरकार ने चार लेबर कोड लागू कर दिए हैं। आजादी के बाद यह श्रमिकों के हित में किया गया सबसे बड़ा रिफॉर्म है। यह देश के कामगारों को बहुत सशक्त बनाने वाला है। इससे जहां नियमों का पालन करना बहुत आसान होगा, वहीं ‘ईज ऑफ डूइंग बिजनेस’ को बढ़ावा मिलेगा।
#श्रमेव_जयते
#ShramevJayate
https://www.pib.gov.in/PressReleseDetailm.aspx?PRID=2192463”
“ये कोड श्रमिक भाई-बहनों के लिए सामाजिक सुरक्षा, समय पर वेतन और सुरक्षित कार्यस्थल की व्यवस्था सुनिश्चित करेंगे। इसके साथ ही, ये बेहतर और लाभकारी अवसरों के लिए एक सशक्त नींव भी बनाएंगे। हमारी माताएं-बहनें और युवा साथी इनसे विशेष रूप से लाभान्वित होंगे।”
“इन सुधारों के जरिए एक ऐसा मजबूत इकोसिस्टम तैयार होगा, जो भविष्य में हमारे कामगारों के अधिकारों की रक्षा करेगा और भारत की आर्थिक वृद्धि को नई शक्ति देगा। इससे नौकरियों के नए-नए अवसर तो बनेंगे ही, प्रोडक्टिविटी भी बढ़ेगी। इसके साथ ही विकसित भारत की हमारी यात्रा को भी तेज गति मिलेगी।”
****
(Release ID: 2192687)
Visitor Counter : 7