ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ
ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಶೇಷ ನಾಣ್ಯ ಮತ್ತು ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ
ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಗೌರವಾರ್ಥವಾಗಿ, ಭಾರತ ಸರ್ಕಾರವು ವರ್ಷಪೂರ್ತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ
ಪ್ರಧಾನಮಂತ್ರಿ ಜ್ಯೋತಿಸರ್ ನ ಮಹಾಭಾರತ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಮತ್ತು 'ಪಾಂಚಜನ್ಯ' ಉದ್ಘಾಟಿಸಲಿದ್ದಾರೆ
Posted On:
24 NOV 2025 12:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಸಂಜೆ 4:00 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಶ್ರೀಕೃಷ್ಣನ ಪವಿತ್ರ ಶಂಖದ ಗೌರವಾರ್ಥವಾಗಿ ನಿರ್ಮಿಸಲಾದ ಹೊಸ 'ಪಾಂಚಜನ್ಯ'ವನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ಮಹಾಭಾರತದ ಪ್ರಮುಖ ಪ್ರಸಂಗಗಳನ್ನು ಪ್ರದರ್ಶಿಸುವ, ಅದರ ಶಾಶ್ವತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಉಲ್ಲೇಖಿಸುವ ಒಂದು ತಲ್ಲೀನಗೊಳಿಸುವ ಅನುಭವ ಕೇಂದ್ರವಾದ ಮಹಾಭಾರತ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ಸಂಜೆ 4:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಪೂಜನೀಯ ಒಂಬತ್ತನೇ ಸಿಖ್ ಗುರು ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಸ್ಮರಣಾರ್ಥ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ಪೂಜ್ಯ ಗುರುಗಳ 350ನೇ ಶಹೀದಿ ದಿವಸ್ ಸ್ಮರಣಾರ್ಥ ವಿಶೇಷ ನಾಣ್ಯ ಮತ್ತು ಸ್ಮರಣಾರ್ಥ ಅಂಚೆಚೀಟಿಯನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ. ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಗೌರವಾರ್ತವಾಗಿ ಭಾರತ ಸರ್ಕಾರವು ವರ್ಷಪೂರ್ತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ನಂತರ, ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಬ್ರಹ್ಮ ಸರೋವರದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ಬ್ರಹ್ಮ ಸರೋವರವು ಭಾರತದ ಅತ್ಯಂತ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ, ಇದನ್ನು ಶ್ರೀಮದ್ ಭಗವದ್ಗೀತೆಯ ದಿವ್ಯದರ್ಶನದೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಈ ಭೇಟಿಯು ನವೆಂಬರ್ 15 ರಿಂದ ಡಿಸೆಂಬರ್ 5 ರವರೆಗೆ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಗೀತಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿದೆ.
*****
(Release ID: 2193551)
Visitor Counter : 4
Read this release in:
Assamese
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Tamil
,
Malayalam