ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವೆಂಬರ್ 26 ರಂದು ʻಸಂವಿಧಾನ ಸದನʼದ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿರುವ ʻಸಂವಿಧಾನ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ


ಮಲಯಾಳಂ, ಮರಾಠಿ, ನೇಪಾಳಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮಿ ಎಂಬ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿ ಬಿಡುಗಡೆ

Posted On: 25 NOV 2025 4:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆಯುವ ʻಸಂವಿಧಾನ ದಿನಾಚರಣೆʼಯಲ್ಲಿ ಭಾಗವಹಿಸಲಿದ್ದಾರೆ. ಈ ವರ್ಷವು ಸಂವಿಧಾನವನ್ನು ಅಂಗೀಕರಿಸಿದ 76ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.

ಸಂವಿಧಾನ ದಿನಾಚರಣೆಯಲ್ಲಿ ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭಾ ಸ್ಪೀಕರ್, ಉಭಯ ಸದನಗಳ ಸಂಸದರು ಮತ್ತು ಇತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿ ಅವರು ಭಾರತ ಸಂವಿಧಾನದ ಪೀಠಿಕೆ ವಾಚನದ ನೇತೃತ್ವ ವಹಿಸಲಿದ್ದಾರೆ. ಇದಲ್ಲದೆ, ಭಾರತದ ಸಂವಿಧಾನದ ಅನುವಾದಿತ ಆವೃತ್ತಿಯನ್ನು ಮಲಯಾಳಂ, ಮರಾಠಿ, ನೇಪಾಳಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದೇ ಕಾರ್ಯಕ್ರಮದಲ್ಲಿ "ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ" ಎಂಬ ಸ್ಮರಣಾರ್ಥ ಕಿರುಪುಸ್ತಕವನ್ನು ಸಹ ಬಿಡುಗಡೆ ಮಾಡಲಾಗುವುದು.

 

*****


(Release ID: 2194382) Visitor Counter : 7