ಪ್ರಧಾನ ಮಂತ್ರಿಯವರ ಕಛೇರಿ
ಸಂವಿಧಾನ ದಿನದಂದು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಕಛೇರಿ ಅಧಿಕಾರಿಗಳು ಭಾಗವಹಿಸಿದರು
प्रविष्टि तिथि:
26 NOV 2025 9:18PM by PIB Bengaluru
ಸಂವಿಧಾನ ದಿನದ ಸಂದರ್ಭದಲ್ಲಿ, ಇಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಾಯಿತು.
ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ; ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ-2 ಶ್ರೀ ಶಕ್ತಿಕಾಂತ ದಾಸ್; ಪ್ರಧಾನಮಂತ್ರಿ ಅವರ ಸಲಹೆಗಾರ ಶ್ರೀ ತರುಣ್ ಕಪೂರ್; ಮತ್ತು ಪ್ರಧಾನಮಂತ್ರಿ ಅವರ ವಿಶೇಷ ಕಾರ್ಯದರ್ಶಿ ಶ್ರೀ ಅತಿಶ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸಂವಿಧಾನ ಪೀಠಿಕೆಯ ವಾಚನದಲ್ಲಿ ಭಾಗವಹಿಸಿದರು.
ಭಾರತದ ಪ್ರಧಾನಮಂತ್ರಿಯವರ ಕಛೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಲಾಗಿದೆ:
"ಇಂದು ಸಂವಿಧಾನ ದಿನದಂದು ಮೊದಲನೆಯದಾಗಿ, ಪ್ರಧಾನಮಂತ್ರಿ ಅವರ ಕಾರ್ಯಾಲಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ, ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ-2 ಶ್ರೀ ಶಕ್ತಿಕಾಂತ ದಾಸ್, ಪ್ರಧಾನಮಂತ್ರಿ ಅವರ ಸಲಹೆಗಾರ ಶ್ರೀ ತರುಣ್ ಕಪೂರ್, ಪ್ರಧಾನಮಂತ್ರಿ ಅವರ ವಿಶೇಷ ಕಾರ್ಯದರ್ಶಿ ಶ್ರೀ ಅತಿಶ್ ಚಂದ್ರ ಮತ್ತು ಇತರರು ಈ ಸಂದರ್ಭದಲ್ಲಿ ಹಾಜರಿದ್ದು ಸಂವಿಧಾನ ಪೀಠಿಕೆಯನ್ನು ವಾಚಿಸಿದರು."
*****
(रिलीज़ आईडी: 2195745)
आगंतुक पटल : 4
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Gujarati
,
Odia
,
Telugu
,
Malayalam