ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಂಧ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ದೃಷ್ಟಿ ಚೇತನ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಆತಿಥ್ಯ

प्रविष्टि तिथि: 27 NOV 2025 10:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇತ್ತೀಚೆಗೆ ಅಂಧ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ದೃಷ್ಟಿಚೇತನ ಮಹಿಳಾ ಕ್ರಿಕೆಟ್ ತಂಡಕ್ಕೆ ಇಂದು ಆತಿಥ್ಯ ವಹಿಸಿದ್ದರು. ಪಂದ್ಯಾವಳಿಯ ಅನುಭವಗಳನ್ನು ಹಂಚಿಕೊಂಡ ಆಟಗಾರರೊಂದಿಗೆ ಶ್ರೀ ನರೇಂದ್ರ ಮೋದಿ ಆತ್ಮೀಯವಾಗಿ ಸಂವಾದ ನಡೆಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಖಾತೆಯ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.

“ಅಂಧ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ದೃಷ್ಟಿಚೇತನ ಮಹಿಳಾ ಕ್ರಿಕೆಟ್ ತಂಡಕ್ಕೆ ಆತಿಥ್ಯ ವಹಿಸಿದ್ದು ಸಂತೋಷಕರವಾಗಿತ್ತು! ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು, ಅದು ನಿಜಕ್ಕೂ ಸ್ಪೂರ್ತಿದಾಯಕವಾಗಿತ್ತು.’’

 

*****


(रिलीज़ आईडी: 2195821) आगंतुक पटल : 6
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Manipuri , Assamese , Gujarati , Tamil , Malayalam