ಸಿನಿಮಾದಲ್ಲಿ 50 ವರ್ಷಗಳನ್ನು ಪೂರೈಸಿದ ತಲೈವರ್: ರಜನಿಕಾಂತ್ ಅವರಿಗೆ 56ನೇ ಐ.ಎಫ್.ಎಫ್.ಐ ನಲ್ಲಿ ಗೌರವ ಸನ್ಮಾನ
“ನನಗೆ 100 ಜನ್ಮಗಳಿದ್ದರೂ, ನಾನು ರಜನಿಕಾಂತ್ ಆಗಿಯೇ ಹುಟ್ಟಲು ಬಯಸುತ್ತೇನೆ”: ಸೂಪರ್‌ಸ್ಟಾರ್
56ನೇ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಭಾರತೀಯ ಚಿತ್ರರಂಗದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಆಚರಿಸಿತು, ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ ದಿಗ್ಗಜ ನಟ ಶ್ರೀ ರಜನಿಕಾಂತ್ ಅವರನ್ನು ಗೌರವಿಸಿತು. ಪ್ರೀತಿಯಿಂದ ತಲೈವರ್ ಎಂದು ಕರೆಯಲ್ಪಡುವ ಶ್ರೀ ರಜನಿಕಾಂತ್, ಪರದೆಯ ಮೇಲೆ ತಮ್ಮ ವರ್ಚಸ್ಸು, ವಿಶಿಷ್ಟ ಶೈಲಿ ಮತ್ತು ಅಪ್ರತಿಮ ಅಭಿನಯದಿಂದ ತಲೆಮಾರುಗಳಾದ್ಯಂತ ಪ್ರೇಕ್ಷಕರಿಗೆ ಮೋಡಿ ಮಾಡಿದ್ದಾರೆ.
ಸಮಾರೋಪ ಸಮಾರಂಭದ ಭಾಗವಾಗಿ ನಡೆದ ಸನ್ಮಾನ ಕಾರ್ಯಕ್ರಮವು, ಶ್ರೀ ರಜನಿಕಾಂತ್ ಅವರು ತಮಿಳು ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿಯೂ ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿತು. 170ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ ಈ ಸೂಪರ್‌ಸ್ಟಾರ್ ಜನಪ್ರಿಯ ಸಂಸ್ಕೃತಿಯ ಮೇಲೆ ಅಳಿಸಲಾಗದ ಛಾಪು ಮೂಡಿಸಿದ್ದಾರೆ, ಪದ್ಮಭೂಷಣ (2000), ಪದ್ಮವಿಭೂಷಣ (2016), ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (2020) ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಗಳಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಅವರು ಶ್ರೀ ರಜನಿಕಾಂತ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಡಾ. ಎಲ್. ಮುರುಗನ್, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಶ್ರೀ ಸಂಜಯ್ ಜಾಜು ಮತ್ತು ನಟ ಶ್ರೀ ರಣವೀರ್ ಸಿಂಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗೌರವ ಸ್ವೀಕರಿಸಿ ಮಾತನಾಡಿದ ಶ್ರೀ ರಜನಿಕಾಂತ್ ಕೇಂದ್ರ ಸರ್ಕಾರಕ್ಕೆ ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಹಿಂತಿರುಗಿ ನೋಡಿದಾಗ, 50 ವರ್ಷಗಳು 10 ಅಥವಾ 15 ವರ್ಷಗಳಂತೆ ಭಾಸವಾಗುತ್ತವೆ, ಏಕೆಂದರೆ ನಾನು ಸಿನಿಮಾ ಮತ್ತು ನಟನೆಯನ್ನು ಪ್ರೀತಿಸುತ್ತೇನೆ ಎಂದು ಅವರು ಹೇಳಿದರು. "100 ಜನ್ಮಗಳಿದ್ದರೂ ಸಹ, ನಾನು ರಜನಿಕಾಂತ್ ಆಗಿಯೇ ಹುಟ್ಟಲು ಬಯಸುತ್ತೇನೆ" ಎಂದು ಸೂಪರ್ ಸ್ಟಾರ್ ಹೇಳಿದರು.
ಈ ಆಚರಣೆಯ ಮೂಲಕ, ಐ.ಎಫ್.ಎಫ್.ಐ 2025, ಭಾಷೆ ಮತ್ತು ಭೌಗೋಳಿಕತೆಯನ್ನು ಮೀರಿದ ಮತ್ತು ಚಲನಚಿತ್ರ ನಿರ್ಮಾತೃಗಳು ಮತ್ತು ಪ್ರೇಕ್ಷಕರಿಗೆ ಸ್ಫೂರ್ತಿ ನೀಡಿದ ಸಾಂಸ್ಕೃತಿಕ ಐಕಾನ್ ಗೆ ಗೌರವ ಸಲ್ಲಿಸಿತು. ಸುವರ್ಣ ಮಹೋತ್ಸವವು ಶ್ರೀ ರಜನಿಕಾಂತ್ ಅವರ ವೈಯಕ್ತಿಕ ಮೈಲಿಗಲ್ಲು ಮಾತ್ರವಲ್ಲ, ಭಾರತೀಯ ಜನಪ್ರಿಯ ಸಂಸ್ಕೃತಿಯನ್ನು ರೂಪಿಸುವಲ್ಲಿ ಸಿನೆಮಾದ ಪರಿವರ್ತನಾ ಶಕ್ತಿಗೆ ಸಾಕ್ಷಿಯಾಗಿದೆ.
ಐ.ಎಫ್.ಎಫ್.ಐ ಬಗ್ಗೆ
1952ರಲ್ಲಿ ಪ್ರಾರಂಭವಾದ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐ.ಎಫ್.ಎಫ್.ಐ) ದಕ್ಷಿಣ ಏಷ್ಯಾದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಸಿನಿಮಾ ಉತ್ಸವವಾಗಿದೆ. ಇದನ್ನು ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್.ಎಫ್.ಡಿ.ಸಿ), ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮತ್ತು ಗೋವಾ ಸರ್ಕಾರದ ಗೋವಾ ಮನರಂಜನಾ ಸೊಸೈಟಿ ಜಂಟಿಯಾಗಿ ಆಯೋಜಿಸುತ್ತವೆ. ಈ ಉತ್ಸವವು ಜಾಗತಿಕ ಸಿನಿಮಾ ಶಕ್ತಿ ಕೇಂದ್ರವಾಗಿ ಬೆಳೆದಿದೆ - ಅಲ್ಲಿ ಪುನಃಸ್ಥಾಪಿಸಲಾದ ಕ್ಲಾಸಿಕ್ ಗಳು ದಿಟ್ಟ ಪ್ರಯೋಗಗಳನ್ನು ಸಂಧಿಸುತ್ತವೆ ಮತ್ತು ಹೆಸರಾಂತ ಕಲಾವಿದರು ಮೊದಲ ಬಾರಿಯ ಧೈರ್ಯಶಾಲಿಗಳೊಂದಿಗೆ ಜಾಗವನ್ನು ಹಂಚಿಕೊಳ್ಳುತ್ತಾರೆ. ಐ ಎಫ್ ಎಫ್ ಐ ಅನ್ನು ನಿಜವಾಗಿಯೂ ಅದ್ಭುತವಾಗಿಸುವುದು ಅದರ ಅದ್ಭುತವಾದ ಸಮ್ಮಿಲನಗಳು - ಅಂತಾರಾಷ್ಟ್ರೀಯ ಸ್ಪರ್ಧೆಗಳು, ಸಾಂಸ್ಕೃತಿಕ ಪ್ರದರ್ಶನಗಳು, ಮಾಸ್ಟರ್‌ಕ್ಲಾಸ್ ಗಳು, ಗೌರವಗಳು ಮತ್ತು ವೇವ್ಸ್ ಫಿಲ್ಮ್ ಬಜಾರ್, ಅಲ್ಲಿ ಕಲ್ಪನೆಗಳು, ವ್ಯವಹಾರಗಳು ಮತ್ತು ಸಹಯೋಗಗಳು ಹುಟ್ಟುತ್ತವೆ. ಗೋವಾದ ಬೆರಗುಗೊಳಿಸುವ ಕಡಲತೀರದ ಹಿನ್ನೆಲೆಯಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯುವ 56ನೇ ಆವೃತ್ತಿಯು ಬೆರಗುಗೊಳಿಸುವ ಭಾಷೆಗಳು, ಪ್ರಕಾರಗಳು, ನಾವೀನ್ಯತೆಗಳು ಮತ್ತು ಧ್ವನಿಗಳ ಒಂದು ಅದ್ಭುತ ಶ್ರೇಣಿಯನ್ನು ಆಚರಿಸುವ ಭರವಸೆ ನೀಡುತ್ತದೆ - ಇದು ವಿಶ್ವ ವೇದಿಕೆಯಲ್ಲಿ ಭಾರತದ ಸೃಜನಶೀಲ ಪ್ರತಿಭೆಯ ತಲ್ಲೀನಗೊಳಿಸುವ ಆಚರಣೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ, ಕ್ಲಿಕ್ ಮಾಡಿ:
IFFI Website: https://www.iffigoa.org/
PIB’s IFFI Microsite: https://www.pib.gov.in/iffi/56/
PIB IFFIWood Broadcast Channel:
https://whatsapp.com/channel/0029VaEiBaML2AU6gnzWOm3F
X Handles: @IFFIGoa, @PIB_India, @PIB_Panaji
****
रिलीज़ आईडी:
2196113
| Visitor Counter:
4