ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

प्रविष्टि तिथि: 01 DEC 2025 10:23AM by PIB Bengaluru

ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:

"ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

"தமிழ்நாட்டின் சிவகங்கையில் நிகழ்ந்த விபத்தில் நேரிட்ட உயிரிழப்புகள் மிகுந்த வேதனை அளிக்கிறது. தங்கள் அன்பிற்குரியவர்களை இழந்தவர்களுடன் எனது எண்ணங்கள் யாவும் உள்ளன. காயமடைந்தவர்கள் விரைவில் குணமடைய பிரார்த்திக்கிறேன்.


விபத்தில் உயிரிழந்தவர்களின் குடும்பத்தினருக்கு பிரதமரின் தேசிய நிவாரண நிதியிலிருந்து தலா ரூ. 2 லட்சம் நிவாரணமாக வழங்கப்படும். காயமடைந்தவர்களுக்கு தலா ரூ. 50,000 வழங்கப்படும்: பிரதமர் @narendramodi"
 

 

****


(रिलीज़ आईडी: 2196757) आगंतुक पटल : 8
इस विज्ञप्ति को इन भाषाओं में पढ़ें: English , Urdu , हिन्दी , Bengali , Assamese , Gujarati , Malayalam