ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು 


ದಿತ್ವಾ ಚಂಡಮಾರುತದಿಂದ ಶ್ರೀಲಂಕಾದಲ್ಲಿ ಸಂಭವಿಸಿದ ಜೀವಹಾನಿ ಮತ್ತು ವಿನಾಶಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ ಸೂಚನೆ

ಭಾರತದ ಸಕಾಲಿಕ ಮತ್ತು ಪರಿಣಾಮಕಾರಿ ಸಹಾಯಕ್ಕಾಗಿ ಹೃತ್ಪೂರ್ವಕ  ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀಲಂಕಾದ ಅಧ್ಯಕ್ಷ ದಿಸಾನಾಯಕೆ

ಮಹಾಸಾಗರ್ ವಿಷನ್ ಗೆ ಅನುಗುಣವಾಗಿ, 'ಮೊದಲ ಪ್ರತಿಸ್ಪಂದಕ'ನಾಗಿ ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ ಭಾರತದ ನಿರಂತರ ಬೆಂಬಲದ ಭರವಸೆಯನ್ನು ನೀಡಿದ ಪ್ರಧಾನಮಂತ್ರಿ

प्रविष्टि तिथि: 01 DEC 2025 8:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. 

ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಸಂಭವಿಸಿದ ಜೀವಹಾನಿ ಮತ್ತು ವ್ಯಾಪಕ ವಿನಾಶಕ್ಕೆ ಪ್ರಧಾನಮಂತ್ರಿ ಅವರು ತಮ್ಮ ಹೃದಯಸ್ಪರ್ಶಿ ಸಂತಾಪಗಳನ್ನು ವ್ಯಕ್ತಪಡಿಸಿದರು. ಈ ಅನಿವಾರ್ಯತೆಯ ಸಮಯದಲ್ಲಿ ಭಾರತೀಯರು ಶ್ರೀಲಂಕಾದ ಜನರೊಂದಿಗೆ ದೃಢವಾದ ಒಗ್ಗಟ್ಟು ಮತ್ತು ಬೆಂಬಲದಲ್ಲಿ ನಿಂತಿದ್ದಾರೆ ಎಂದು ಅವರು ಶ್ರೀ ಅನುರ ಕುಮಾರ ದಿಸಾನಾಯಕೆ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಈ ಪ್ರಕೃತಿ ವಿಪತ್ತಿನ ಹಿನ್ನೆಲೆಯಲ್ಲಿ ಭಾರತ ನೀಡಿದ ಸಹಾಯಕ್ಕಾಗಿ ಅಧ್ಯಕ್ಷ ದಿಸಾನಾಯಕೆ ಅವರು ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ರಕ್ಷಣಾ ತಂಡಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ತ್ವರಿತವಾಗಿ ನಿಯೋಜಿಸಿದ್ದಕ್ಕಾಗಿ ಭಾರತವನ್ನು ಅವರು ಶ್ಲಾಘಿಸಿದರು. ಭಾರತದ ಸಕಾಲಿಕ ಮತ್ತು ಪರಿಣಾಮಕಾರಿ ಪ್ರತಿಕ್ರಿಯಾ ಪ್ರಯತ್ನಗಳಿಗೆ ಶ್ರೀಲಂಕಾದ ಜನರ ಪರವಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಪ್ರಸ್ತುತ ಪ್ರಗತಿಯಲ್ಲಿರುವ ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ ಭಾರತವು ಶ್ರೀಲಂಕಾಕ್ಕೆ ನಿರಂತರ ಬೆಂಬಲವನ್ನು ನೀಡುವುದಾಗಿ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ರಕ್ಷಣೆ ಮತ್ತು ಪರಿಹಾರವನ್ನು ಒದಗಿಸುವುದಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ದಿಸಾನಾಯಕೆ ಅವರಿಗೆ ಭರವಸೆ ನೀಡಿದರು. ಮಹಾಸಾಗರ್ ದೃಷ್ಟಿಕೋನದಿಂದ, ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ 'ಮೊದಲ ಪ್ರತಿಸ್ಪಂದಕ' ಎಂಬ ತನ್ನ ಸ್ಥಾಪಿತ ಸ್ಥಾನಕ್ಕೆ ಅನುಗುಣವಾಗಿ, ಭಾರತವು ಮುಂಬರುವ ದಿನಗಳಲ್ಲಿ ಅಗತ್ಯವಿರುವ ಎಲ್ಲಾ ಅಗತ್ಯ ಸಹಾ ಅವನ್ನು ನೀಡುವುದಾಗಿ ಪ್ರಧಾನಮಂತ್ರಿ ಅವರು ಭರವಸೆ ನೀಡಿದರು.

ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.

 

****
 


(रिलीज़ आईडी: 2197443) आगंतुक पटल : 3
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu