ಪ್ರಧಾನ ಮಂತ್ರಿಯವರ ಕಛೇರಿ
ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
03 DEC 2025 9:11AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. "ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ", ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ಖಾತೆಯಲ್ಲಿ ಹೀಗೆ ಪೊಸ್ಟ್ ಮಾಡಿದ್ದಾರೆ:
"ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಉದ್ದೇಶದ ಸ್ಪಷ್ಟತೆಯೊಂದಿಗೆ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಭಕ್ತಿಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ."
****
(रिलीज़ आईडी: 2197985)
आगंतुक पटल : 10