ಪ್ರಧಾನ ಮಂತ್ರಿಯವರ ಕಛೇರಿ
ಚೀತಾಗಳ ಮರುಪರಿಚಯ ಕಾರ್ಯಕ್ರಮವು ವನ್ಯಜೀವಿಗಳ ಸಂರಕ್ಷಣೆಗೆ ನಮ್ಮ ಬದ್ಧತೆಯನ್ನು ಹೇಗೆ ಪ್ರತಿಬಿಂಬಿಸುತ್ತದೆ ಎಂಬ ಕುರಿತು ಲೇಖನ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
04 DEC 2025 2:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀತಾಗಳ ಮರುಪರಿಚಯ ಕಾರ್ಯಕ್ರಮವು ವನ್ಯಜೀವಿಗಳ ಸಂರಕ್ಷಣೆಗೆ ಹೇಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂಬ ಕುರಿತು ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ದೇಶದಲ್ಲಿ ಚೀತಾಗಳ ಸಂತತಿ ಹೆಚ್ಚಾಗುತ್ತಿರುವುದು ಅತ್ಯಂತ ಉತ್ತೇಜನಕಾರಿಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. "ಭಾರತದಲ್ಲಿ ಜನಿಸಿದ ಹೆಣ್ಣು ಚೀತಾದಿಂದ ಐದು ಮರಿಗಳ ಜನನವು ಚೀತಾಗಳು ಸಂಪೂರ್ಣವಾಗಿ ಭಾರತೀಯ ಪರಿಸರಕ್ಕೆ ಹೊಂದಿಕೊಂಡಿವೆ ಎಂಬುದಕ್ಕೆ ಪ್ರಬಲ ಸಾಕ್ಷಿಯಾಗಿದೆ" ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಕೇಂದ್ರ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರ ಪೋಸ್ಟ್ ಗೆ ಪ್ರಧಾನಮಂತ್ರಿ ಹೀಗೆ ಪ್ರತಿಕ್ರಿಯಿಸಿದ್ದಾರೆ.
"ದೇಶದಲ್ಲಿ ಚೀತಾಗಳ ಸಂತತಿ ಹೆಚ್ಚಾಗುತ್ತಿರುವುದು ತುಂಬಾ ಉತ್ತೇಜನಕಾರಿಯಾಗಿದೆ. ಭಾರತೀಯ ಮೂಲದ ಹೆಣ್ಣು ಚೀತಾ ಐದು ಮರಿಗಳ ಜನನವು ಚೀತಾಗಳು ಭಾರತೀಯ ಪರಿಸರದಲ್ಲಿ ಉತ್ತಮವಾಗಿ ನೆಲೆಗೊಂಡಿವೆ ಎಂಬುದಕ್ಕೆ ಪ್ರಬಲ ಸಾಕ್ಷಿಯಾಗಿದೆ. ಈ ಲೇಖನದಲ್ಲಿ, ಕೇಂದ್ರ ಸಚಿವರಾದ @byadavbjp ಅವರು ಚೀತಾಗಳ ಸ್ಥಳಾಂತರ ಕಾರ್ಯಕ್ರಮವು ವನ್ಯಜೀವಿ ಸಂರಕ್ಷಣೆಗೆ ಹೇಗೆ ನಮ್ಮ ಬದ್ಧತೆ ಪ್ರದರ್ಶಿಸುತ್ತದೆ ಎಂಬುದನ್ನು ವಿವರಿಸಿದ್ದಾರೆ."
*****
(रिलीज़ आईडी: 2198680)
आगंतुक पटल : 4