ಗೃಹ ವ್ಯವಹಾರಗಳ ಸಚಿವಾಲಯ
ಗೋವಾದಲ್ಲಿ ಘಟಿಸಿದ ಬೆಂಕಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ
ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಸಂಭವಿಸಿದ ದುರಂತ ಸಾವು ತೀವ್ರ ನೋವುಂಟು ಮಾಡಿದೆ
ಸ್ಥಳೀಯ ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ಆರೈಕೆಯನ್ನು ಒದಗಿಸುತ್ತಿದೆ
ಮರಣ ಹೊಂದಿದವರ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು ಮತ್ತು ಗಾಯಾಳುಗಳ ತ್ವರಿತ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ
प्रविष्टि तिथि:
07 DEC 2025 2:52PM by PIB Bengaluru
ಗೋವಾದಲ್ಲಿ ಘಟಿಸಿದ ಬೆಂಕಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಕೇಂದ್ರ ಗೃಹ ಸಚಿವರು, “ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಭವಿಸಿದ ದುರಂತ ಸಾವು ತೀವ್ರ ನೋವಿನಿಂದ ಕೂಡಿದೆ. ಸ್ಥಳೀಯ ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ಆರೈಕೆಯನ್ನು ಒದಗಿಸುತ್ತಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು ಮತ್ತು ಗಾಯಾಳುಗಳ ತ್ವರಿತ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ.” ಎಂದು ತಿಳಿಸಿದ್ದಾರೆ
****
(रिलीज़ आईडी: 2200006)
आगंतुक पटल : 6