ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

प्रविष्टि तिथि: 07 DEC 2025 7:08AM by PIB Bengaluru

ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಅಲ್ಲಿನ ಪರಿಸ್ಥಿತಿಯ ಕುರಿತು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿರುವುದಾಗಿ ಪ್ರಧಾನಮಂತ್ರಿ ತಿಳಿಸಿದ್ದಾರೆ. ದುರಂತದಿಂದ ಸಂಕಷ್ಟಕ್ಕೀಡಾದವರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: 

"ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ ವಿಷಯ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಶೀಘ್ರವೇ ಗುಣಮುಖರಾಗಲಿ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ.'' 

@DrPramodPSawant”

ದುರ್ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಛೇರಿ ಎಕ್ಸ್ ಪೋಸ್ಟ್ ನಲ್ಲಿ; 

“ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****


(रिलीज़ आईडी: 2200227) आगंतुक पटल : 6
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Bengali-TR , Punjabi , Gujarati , Odia , Tamil , Telugu , Malayalam