ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 12 DEC 2025 8:59AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯ ಕೋರಿದ್ದಾರೆ.

ರಜನಿಕಾಂತ್ ಅವರ ಅದ್ಭುತ ಅಭಿನಯವು ತಲೆಮಾರುಗಳಿಂದ ಪ್ರೇಕ್ಷಕರನ್ನು ಆಕರ್ಷಿಸಿದೆ ಮತ್ತು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ ಎಂದು ಪ್ರಧಾನಿ ಉಲ್ಲೇಖಿಸಿದರು. ವೈವಿಧ್ಯಮಯ ಪಾತ್ರಗಳು, ಪ್ರಕಾರಗಳು ಮತ್ತು ಸಿನಿಮೀಯ ಶೈಲಿಗಳನ್ನು ಒಳಗೊಂಡ ನಟನ ಗಮನಾರ್ಹ ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ ನಿರಂತರವಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿವೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಶ್ರೀ ರಜನಿಕಾಂತ್ ಅವರು ಚಲನಚಿತ್ರ ರಂಗದಲ್ಲಿ 50 ಶ್ರೇಷ್ಠ ವರ್ಷಗಳನ್ನು ಪೂರೈಸುತ್ತಿರುವುದರಿಂದ ಈ ವರ್ಷವು ಅವರಿಗೆ ವಿಶೇಷ ಮಹತ್ವದ್ದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು, ಇದು ಅವರ ನಿರಂತರ ಪ್ರಭಾವ ಮತ್ತು ಉದ್ಯಮಕ್ಕೆ ಅಪ್ರತಿಮ ಕೊಡುಗೆಯನ್ನು ಪ್ರತಿಬಿಂಬಿಸುವ ಮೈಲಿಗಲ್ಲು ಎಂದು ಹೇಳಿರುವ ಅವರು, ಶ್ರೀ ರಜನಿಕಾಂತ್ ಅವರಿಗೆ ದೀರ್ಘ, ಆರೋಗ್ಯಕರ ಮತ್ತು ತೃಪ್ತಿಕರ ಜೀವನಕ್ಕಾಗಿ ಅವರು ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಪ್ರತ್ಯೇಕ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳು. ಅವರ ಅಭಿನಯವು ಪೀಳಿಗೆಗಳನ್ನು ಆಕರ್ಷಿಸಿದೆ ಮತ್ತು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ. ಅವರ ಸಿನಿಮಾಗಳು ವೈವಿಧ್ಯಮಯ ಪಾತ್ರಗಳು ಮತ್ತು ಪ್ರಕಾರಗಳನ್ನು ವ್ಯಾಪಿಸಿವೆ ಮತ್ತು ನಿರಂತರ ಮಾನದಂಡಗಳನ್ನು ಸ್ಥಾಪಿಸುತ್ತವೆ. ಅವರು ಚಲನಚಿತ್ರ ಜಗತ್ತಿನಲ್ಲಿ 50 ವರ್ಷಗಳನ್ನು ಪೂರೈಸಿದ್ದರಿಂದ ಈ ವರ್ಷ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’’.

“திரு ரஜினிகாந்த் அவர்களின் 75-வது பிறந்தநாள் எனும் சிறப்பான தருணத்தில் அவருக்கு வாழ்த்துகள். அவரது நடிப்பாற்றல் பல தலைமுறைகளைக் கவர்ந்துள்ளது; பரவலான பாராட்டைப் பெற்றுள்ளது. அவரது திரையுலகப் படைப்புகள் பல்வேறு பாத்திரங்கள் மற்றும் பாணிகளில் பரவி, தொடர்ச்சியான முத்திரைகளைப் பதித்துள்ளன. திரைப்பட உலகில் அவர் 50 ஆண்டுகளை நிறைவு செய்திருப்பது இந்த ஆண்டின் குறிப்பிடத்தக்க அம்சமாகும். அவரது நீண்டகால, ஆரோக்கியமான வாழ்க்கைக்காகப் பிரார்த்திக்கிறேன்.”

 

*****


(रिलीज़ आईडी: 2202774) आगंतुक पटल : 5
इस विज्ञप्ति को इन भाषाओं में पढ़ें: Tamil , Malayalam , English , Urdu , Marathi , हिन्दी , Manipuri , Bengali , Assamese , Gujarati , Odia , Telugu