ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
प्रविष्टि तिथि:
12 DEC 2025 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪಿಎಂಒ ಇಂಡಿಯಾ ತನ್ನ ಎಕ್ಸ್ X ಖಾತೆಯಲ್ಲಿ ಹೀಗೆ ಹೇಳಿದೆ.
“ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ಜೀವಹಾನಿಯಾಗಿವುದು ನೋವುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”
"ఆంధ్రప్రదేశ్లోని అల్లూరి సీతారామరాజు జిల్లాలో జరిగిన బస్సు ప్రమాదంలో ప్రాణనష్టం సంభవించడం చాలా బాధాకరం. ఈ క్లిష్ట సమయంలో బాధిత ప్రజలు మరియు వారి కుటుంబాలకు నా ప్రగాఢ సానుభూతిని తెలియజేస్తూ, గాయపడినవారు త్వరగా కోలుకోవాలని ప్రార్థిస్తున్నాను. ప్రమాదంలో మరణించిన వారి కుటుంబాలకు రూ. 2 లక్షలు, గాయపడిన వారికి రూ. 50,000 ఎక్స్ గ్రేషియా పిఎంఎన్ఆర్ఎఫ్ నుండి ఇవ్వబడుతుంది: ಪ್ರಧಾನಮಂತ್ರಿ @narendramodi"
*****
(रिलीज़ आईडी: 2202791)
आगंतुक पटल : 5
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Gujarati
,
Odia
,
Tamil
,
Telugu
,
Malayalam