ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ

प्रविष्टि तिथि: 11 DEC 2025 10:20AM by PIB Bengaluru

ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,

ಇದನ್ನು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಹೀಗೆ ಬರೆದುಕೊಂಡಿದ್ದಾರೆ:

"ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು. ಅವರ ವಚನಗಳು ಧೈರ್ಯವನ್ನು ತುಂಬಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಅವರು ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿದರು. ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸುವತ್ತ ಅವರು ಕೆಲಸ ಮಾಡಿದ್ದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸುವಲ್ಲಿ ಅವರ ಕೊಡುಗೆಗಳಿಗೆ ಸಾಟಿಯಿಲ್ಲ."

“மகாகவி சுப்ரமணிய பாரதியின் பிறந்தநாளில் அவருக்கு மரியாதை செலுத்துகிறேன் . அவரது கவிதைகள் துணிவைத் தூண்டின, அவரது சிந்தனைகள்  எண்ணற்ற மக்களின் மனதில் நீடித்த தாக்கத்தை ஏற்படுத்தும் ஆற்றலைக்  கொண்டிருந்தன. இந்தியாவின் கலாச்சார,  தேசிய உணர்வை அவர் ஒளிரச் செய்தார். நீதியான, அனைவரையும் உள்ளடக்கிய ஒரு சமூகத்தை உருவாக்க அவர் பாடுபட்டார். தமிழ் இலக்கியத்தை செழுமைப்படுத்துவதில் அவர் ஆற்றிய பங்களிப்புகளும் ஒப்பிலாதவை.”

 

*****


(रिलीज़ आईडी: 2202804) आगंतुक पटल : 4
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam