ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 12 DEC 2025 10:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರನ್ನು ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನುಭವಿ ನಾಯಕ ಎಂದು ಬಣ್ಣಿಸಿದ್ದಾರೆ.

ಶಾಸಕರು, ಸಂಸದರು, ಕೇಂದ್ರ ಸಚಿವರು, ಮಹಾರಾಷ್ಟ್ರ ವಿಧಾನಸಭೆಯ ಮತ್ತು ಲೋಕಸಭೆಯ ಸ್ಪೀಕರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿ ತಮ್ಮ ಸುದೀರ್ಘ ಮತ್ತು ವಿಶಿಷ್ಟ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಶ್ರೀ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಶ್ರೀ ಪಾಟೀಲ್ ಅವರು ಸಾಮಾಜಿಕ ಕಲ್ಯಾಣಕ್ಕಾಗಿ ತಮ್ಮ ಬದ್ಧತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ದೃಢ ಸಮರ್ಪಣೆಗೆ ಹೆಸರುವಾಸಿಯಾಗಿದ್ದರು ಎಂದು ಹೇಳಿದ್ದಾರೆ.

ಕೆಲವು ವರ್ಷಗಳಿಂದೀಚೆಗೆ ಶ್ರೀ ಪಾಟೀಲ್ ಅವರೊಂದಿಗೆ ನಡೆಸಿದ ತಮ್ಮ ಹಲವು ಸಂವಾದಗಳನ್ನು ಸ್ಮರಿಸಿಕೊಂಡಿರುವ ಪ್ರಧಾನಮಂತ್ರಿ ಅವರು,  ಕೆಲವು ತಿಂಗಳ ಹಿಂದೆ ಶ್ರೀ ಪಾಟೀಲ್ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದು ಇತ್ತೀಚಿನ ಭೇಟಿಯಾಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಶ್ರೀ ಮೋದಿ ತಮ್ಮ X ನ ಪ್ರತ್ಯೇಕ ಪೋಸ್ಟ್‌ಗಳಲ್ಲಿ ಹೀಗೆ ಬರೆದಿದ್ದಾರೆ:

“ಶ್ರೀ ಶಿವರಾಜ್ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಅನುಭವಿ ನಾಯಕರಾಗಿದ್ದರು, ಸಾರ್ವಜನಿಕ ಜೀವನದಲ್ಲಿ ತಮ್ಮ ಸುದೀರ್ಘ ಪಯಣದಲ್ಲಿ ಅವರು ಶಾಸಕರು, ಸಂಸದರು, ಕೇಂದ್ರ ಸಚಿವರು, ಮಹಾರಾಷ್ಟ್ರ ವಿಧಾನಸಭೆಯ ಹಾಗೂ ಲೋಕಸಭೆಯ ಸ್ಪೀಕರ್ ಅಗಿ ಸೇವೆ ಸಲ್ಲಿಸಿದ್ದಾರೆ. ಸಮಾಜದ ಕಲ್ಯಾಣಕ್ಕೆ ಕೊಡುಗೆ ನೀಡುವ ಬಗ್ಗೆ ಅವರು ಉತ್ಸುಕರಾಗಿದ್ದರು. ಕೆಲವು ವರ್ಷಗಳಿಂದೀಚೆಗೆ ನಾನು ಅವರೊಂದಿಗೆ ಹಲವು ಬಾರಿ ಸಂವಾದ ನಡೆಸಿದ್ದೇನೆ, ಇತ್ತೀಚೆಗೆ  ಕೆಲವು ತಿಂಗಳ ಹಿಂದೆ ಅವರು ನನ್ನ ನಿವಾಸಕ್ಕೆ ಬಂದಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ.’’

“श्री शिवराज पाटील जी यांच्या निधनाने दुःख झाले आहे. ते एक अनुभवी नेते होते. सार्वजनिक जीवनातील आपल्या प्रदीर्घ कारकिर्दीत त्यांनी आमदार, खासदार, केंद्रीय मंत्री, महाराष्ट्र विधानसभेचे तसेच लोकसभेचे अध्यक्ष म्हणून काम केले. समाजाच्या कल्याणासाठी योगदान देण्याच्या ध्येयाने ते झपाटले होते. ​गेल्या काही वर्षांत त्यांच्यासोबत माझे अनेक वेळा संवाद झाले, त्यापैकी सर्वात अलीकडील भेट काही महिन्यांपूर्वीच जेव्हा ते माझ्या निवासस्थानी आले होते तेव्हा झाली होती. या दुःखद प्रसंगी माझ्या संवेदना त्यांच्या कुटुंबीयांसोबत आहेत. ओम शांती.”

 

*****


(रिलीज़ आईडी: 2202852) आगंतुक पटल : 7
इस विज्ञप्ति को इन भाषाओं में पढ़ें: Urdu , English , Marathi , हिन्दी , Manipuri , Bengali , Assamese , Gujarati , Tamil , Malayalam