ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಮೆರಿಕ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ

प्रविष्टि तिथि: 11 DEC 2025 8:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದರು.

ಉಭಯ ನಾಯಕರು ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧಗಳಲ್ಲಿನ ಸ್ಥಿರ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸಲು ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದರು.

ಈ ಸಂಬಂದ ಎಕ್ಸ್ ಖಾತೆಯಲ್ಲಿ ಶ್ರೀ ಮೋದಿ ಅವರು ಈ ರೀತಿ ಹೇಳಿದ್ದಾರೆ:

"ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಆತ್ಮೀಯ ಮತ್ತು ಆಕರ್ಷಕ ಮಾತುಕತೆ ನಡೆಸಿದೆ. ನಾವು ನಮ್ಮ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದ್ದೇವೆ ಮತ್ತು ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇವೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ.

@realDonaldTrump

@POTUS" 

 

*****

 

 


(रिलीज़ आईडी: 2203003) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Telugu , Malayalam