ಪ್ರಧಾನ ಮಂತ್ರಿಯವರ ಕಛೇರಿ
ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
11 DEC 2025 6:39PM by PIB Bengaluru
ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪಿಎಂಒ ಇಂಡಿಯಾ ಅಧಿಕೃತ ಖಾತೆಯಲ್ಲಿ ಈ ರೀತಿ ಪೋಸ್ಟ್ ಮಾಡಲಾಗಿದೆ:
"ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2203054)
ವಿಸಿಟರ್ ಕೌಂಟರ್ : 35
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam