ಪ್ರಧಾನ ಮಂತ್ರಿಯವರ ಕಛೇರಿ
ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ - ಪ್ರಧಾನಮಂತ್ರಿ ಖಂಡನೆ
ಭೀಕರ ದುರ್ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
14 DEC 2025 5:23PM by PIB Bengaluru
ಯಹೂದಿಗಳ ಹಬ್ಬವಾದ ಹನುಕ್ಕಾದ ಮೊದಲ ದಿನವನ್ನು ಆಚರಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ದುರಂತ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಶ್ರೀ ಮೋದಿ ಅವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಭಾರತದ ಜನರ ಪರವಾಗಿ ಸಂತಾಪ ಸೂಚಿಸಿದ್ದಾರೆ. ಈ ತೀವ್ರ ದುಃಖದ ಸಮಯದಲ್ಲಿ ಆಸ್ಟ್ರೇಲಿಯಾದ ಜನರೊಂದಿಗೆ ಭಾರತ ಸಂಪೂರ್ಣ ಒಗ್ಗಟ್ಟಿನಿಂದ ನಿಲ್ಲಲಿದೆ ಎಂದು ಅವರು ಧೈರ್ಯ ತುಂಬಿದ್ದಾರೆ.
ಈ ಬಗ್ಗೆ ಭಾರತದ ಅಚಲ ನಿಲುವನ್ನು ಪುನರುಚ್ಚರಿಸಿರುವ ಪ್ರಧಾನಮಂತ್ರಿ, ಭಯೋತ್ಪಾದನೆಯ ಬಗ್ಗೆ ಭಾರತ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಮತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಜಾಗತಿಕ ಹೋರಾಟವನ್ನು ದೃಢವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
"ಯಹೂದಿ ಹಬ್ಬದ ಹನುಕ್ಕಾ ಉತ್ಸವದ ಮೊದಲ ದಿನವನ್ನು ಆಚರಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಭಾರತದ ಜನರ ಪರವಾಗಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ಆಸ್ಟ್ರೇಲಿಯಾದ ಜನರೊಂದಿಗೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ. ಭಾರತವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಹಾಗೂ ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧದ ಹೋರಾಟವನ್ನು ಬೆಂಬಲಿಸುತ್ತದೆ."
*****
(रिलीज़ आईडी: 2203919)
आगंतुक पटल : 7
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu