ಪ್ರಧಾನ ಮಂತ್ರಿಯವರ ಕಛೇರಿ
ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
16 DEC 2025 12:54PM by PIB Bengaluru
ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.
ಇದೇ ವೇಳೆ, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;
"ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2204564)
ವಿಸಿಟರ್ ಕೌಂಟರ್ : 36
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam