ಪ್ರಧಾನ ಮಂತ್ರಿಯವರ ಕಛೇರಿ
ಡಿಸೆಂಬರ್ 20 ರಂದು ಪ್ರಧಾನಮಂತ್ರಿ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ
ಪಶ್ಚಿಮ ಬಂಗಾಳದಲ್ಲಿ ಸುಮಾರು 3,200 ಕೋಟಿ ರೂ. ವೆಚ್ಚದ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ನಾಡಿಯಾ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-34 ರ 66.7 ಕಿ.ಮೀ ಉದ್ದದ ಬಾರಾಜಗುಲಿ - ಕೃಷ್ಣನಗರ ವಿಭಾಗದ ಚತುಷ್ಪಥ ರಸ್ತೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
ಉತ್ತರ 24 ಪರಗಣ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-34 ರ 17.6 ಕಿ.ಮೀ ಉದ್ದದ ಬಾರಾಜಸತ್ - ಬಾರಾಜಗುಲಿ ವಿಭಾಗದ ಚತುಷ್ಪಥ ಕಾಮಗಾರಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
ಈ ಯೋಜನೆಗಳು ಕೋಲ್ಕತ್ತಾ ಮತ್ತು ಸಿಲಿಗುರಿ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಲಿವೆ
प्रविष्टि तिथि:
19 DEC 2025 2:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಸುಮಾರು 11:15ಕ್ಕೆ ಪ್ರಧಾನಮಂತ್ರಿಯವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ರಾಣಾಘಾಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಮಂತ್ರಿ ಅವರು ಸುಮಾರು 3,200 ಕೋಟಿ ರೂ. ಮೌಲ್ಯದ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿ ಶಿಲಾನ್ಯಾಸ ಮಾಡಲಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ NH-34ರ 66.7 ಕಿಮೀ ಉದ್ದದ ಬರಜಗುಲಿ - ಕೃಷ್ಣಾನಗರ ವಿಭಾಗದ ಚತುಷ್ಪಥ ರಸ್ತೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ NH-34ರ 17.6 ಕಿಮೀ ಉದ್ದದ ಬಾರಾಸತ್-ಬರಜಗುಲಿ ವಿಭಾಗದ ಚತುಷ್ಪಥ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಯೋಜನೆಗಳು ಕೋಲ್ಕತ್ತಾ ಮತ್ತು ಸಿಲಿಗುರಿ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಲಿವೆ. ಇವು ಪ್ರಯಾಣದ ಸಮಯವನ್ನು ಸುಮಾರು 2 ಗಂಟೆಗಳಷ್ಟು ಕಡಿಮೆ ಮಾಡಲು ಸಹಾಯ ಮಾಡಲಿವೆ, ತಡೆರಹಿತ ಸಂಚಾರ ಮತ್ತು ವಾಹನಗಳ ವೇಗವಾದ ಹಾಗೂ ಸುಗಮ ಚಲನೆಯನ್ನು ಖಚಿತಪಡಿಸಲಿವೆ, ವಾಹನ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿವೆ ಮತ್ತು ಕೋಲ್ಕತ್ತಾದಿಂದ ಪಶ್ಚಿಮ ಬಂಗಾಳದ ಇತರ ನೆರೆಯ ಜಿಲ್ಲೆಗಳಿಗೆ ಹಾಗೂ ನೆರೆಯ ದೇಶಗಳೊಂದಿಗೆ ಸಂಪರ್ಕವನ್ನು ಸುಧಾರಿಸಲಿವೆ. ಈ ಯೋಜನೆಗಳು ಈ ಪ್ರದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲಿವೆ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ವೇಗ ನೀಡಲಿವೆ.
*****
(रिलीज़ आईडी: 2206592)
आगंतुक पटल : 9
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Punjabi
,
Gujarati
,
Odia
,
Tamil
,
Telugu
,
Malayalam