ರಾಷ್ಟ್ರಪತಿಗಳ ಕಾರ್ಯಾಲಯ
ಕ್ರಿಸ್ಮಸ್ ಹಬ್ಬದ ಮುನ್ನಾದಿನದಂದು ಭಾರತದ ರಾಷ್ಟ್ರಪತಿ ಅವರಿಂದ ಶುಭಾಶಯ
ಪ್ರಕಟಣಾ ದಿನಾಂಕ:
24 DEC 2025 5:12PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕ್ರಿಸ್ಮಸ್ ಹಬ್ಬದ ಮುನ್ನಾ ದಿನದಂದು ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
“ಕ್ರಿಸ್ ಮಸ್ ಶುಭ ಸಂದರ್ಭದಲ್ಲಿ, ಎಲ್ಲಾ ನಾಗರಿಕರಿಗೆ, ವಿಶೇಷವಾಗಿ ಕ್ರಿಶ್ಚಿಯನ್ ಸಮುದಾಯದ ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಶುಭ ಹಾರೈಕೆಗಳು" ಎಂದು ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
"ಸಂತೋಷ ಮತ್ತು ಉತ್ಸಾಹದ ಹಬ್ಬವಾದ ಕ್ರಿಸ್ಮಸ್, ಪ್ರೀತಿ ಮತ್ತು ಕರುಣೆಯ ಸಂದೇಶವನ್ನು ಸಾರುತ್ತದೆ. ಇದು ಮಾನವಕುಲದ ಕಲ್ಯಾಣಕ್ಕಾಗಿ ಭಗವಂತ ಯೇಸು ಕ್ರಿಸ್ತನು ಮಾಡಿದ ತ್ಯಾಗವನ್ನು ನೆನಪಿಸುತ್ತದೆ. ಈ ಪವಿತ್ರ ಸಂದರ್ಭವು ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸಮಾನತೆ ಮತ್ತು ಸೇವೆಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲು ನಮಗೆ ಸ್ಫೂರ್ತಿ ನೀಡುತ್ತದೆ.
ನಾವು, ದಯೆ ಮತ್ತು ಪರಸ್ಪರ ಸಾಮರಸ್ಯ ಉತ್ತೇಜಿಸುವ ಸಮಾಜ ನಿರ್ಮಾಣಕ್ಕೆ ಯೇಸು ಕ್ರಿಸ್ತನು ತೋರಿಸಿದ ಮಾರ್ಗವನ್ನು ಅನುಸರಿಸುವ ಸಂಕಲ್ಪ ಮಾಡೋಣ” ಎಂದು ಅವರು ಕರೆ ನೀಡಿದ್ದಾರೆ.
ರಾಷ್ಟ್ರಪತಿಗಳ ಸಂದೇಶ ನೋಡಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ -
*****
(ಪ್ರಕಟಣೆ ಐ.ಡಿ.: 2208327)
ವಿಸಿಟರ್ ಕೌಂಟರ್ : 74
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Punjabi
,
Gujarati
,
Tamil
,
Telugu
,
Malayalam