ಪ್ರಧಾನ ಮಂತ್ರಿಯವರ ಕಛೇರಿ
ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
30 DEC 2025 9:53AM by PIB Bengaluru
ಢಾಕಾದಲ್ಲಿ ಮಾಜಿ ಪ್ರಧಾನಮಂತ್ರಿ ಮತ್ತು ಬಿ.ಎನ್.ಪಿ. ಅಧ್ಯಕ್ಷರಾದ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ:
"ಢಾಕಾದಲ್ಲಿ ಮಾಜಿ ಪ್ರಧಾನಮಂತ್ರಿ ಮತ್ತು ಬಿ.ಎನ್.ಪಿ ಅಧ್ಯಕ್ಷರಾದ ಬೇಗಂ ಖಲೀದಾ ಜಿಯಾ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.
ಅವರ ಕುಟುಂಬಕ್ಕೆ ಮತ್ತು ಬಾಂಗ್ಲಾದೇಶದ ಎಲ್ಲ ಜನತೆಗೆ ನಮ್ಮ ಪ್ರಾಮಾಣಿಕ ಸಂತಾಪಗಳು. ಈ ದುರಂತ ನಷ್ಟವನ್ನು ಭರಿಸುವ ಧೈರ್ಯವನ್ನು ದೇವರು ಅವರ ಕುಟುಂಬಕ್ಕೆ ನೀಡಲಿ.
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಬಾಂಗ್ಲಾದೇಶದ ಅಭಿವೃದ್ಧಿಗೆ ಮತ್ತು ಭಾರತ-ಬಾಂಗ್ಲಾದೇಶದ ಸಂಬಂಧಗಳಿಗೆ ಅವರು ನೀಡಿದ ಪ್ರಮುಖ ಕೊಡುಗೆಗಳು ಸದಾ ನೆನಪಿನಲ್ಲಿ ಉಳಿಯುತ್ತವೆ.
2015ರಲ್ಲಿ ಢಾಕಾದಲ್ಲಿ ಅವರೊಂದಿಗಿನ ನನ್ನ ಆತ್ಮೀಯ ಭೇಟಿಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ದೂರದೃಷ್ಟಿ ಮತ್ತು ಪರಂಪರೆಯು ನಮ್ಮ ಪಾಲುದಾರಿಕೆಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ನಾವು ಭಾವಿಸುತ್ತೇವೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ."
*****
(ಪ್ರಕಟಣೆ ಐ.ಡಿ.: 2209710)
ವಿಸಿಟರ್ ಕೌಂಟರ್ : 92
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam