ಪ್ರಧಾನ ಮಂತ್ರಿಯವರ ಕಛೇರಿ
ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿರುವ ಅರ್ಜುನ್ ಎರಿಗೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
31 DEC 2025 9:04AM by PIB Bengaluru
ದೋಹಾದಲ್ಲಿ ನಡೆದ ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತೀಯ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಫಿಡೆ ರ‍್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಇತ್ತೀಚೆಗಷ್ಟೇ ಕಂಚಿನ ಪದಕ ಜಯಿಸಿದ್ದು ಈಗ ಈ ಸಾಧನೆಯು, ಜಾಗತಿಕ ಚೆಸ್ ರಂಗದಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ.
ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
“ಚೆಸ್‌ನಲ್ಲಿ ಭಾರತ ಇನ್ನಷ್ಟು ದಾಪುಗಾಲಿಡುತ್ತಿದೆ!
ಇತ್ತೀಚೆಗೆ FIDE ರ‍್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದಿದ್ದು, ಈಗ ದೋಹಾದಲ್ಲಿ ನಡೆದ FIDE ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕೂಡ ಕಂಚಿನ ಪದಕ ಜಯಿಸಿರುವ ಅರ್ಜುನ್ ಎರಿಗೈಸಿ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ, ತಾಳ್ಮೆ ಮತ್ತು ಒಲವು ಅನುಕರಣೀಯ. ಅವರ ಯಶಸ್ಸು ನಮ್ಮ ಯುವಜನರಿಗೆ ಸ್ಫೂರ್ತಿ ನೀಡುತ್ತಲೇ ಇರಲಿದೆ. ಅವರಿಗೆ ನನ್ನ ಶುಭ ಹಾರೈಕೆಗಳು.
@ArjunErigaisi”
*****
(रिलीज़ आईडी: 2210200)
आगंतुक पटल : 4
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam