ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
01 JAN 2026 10:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. ಸುರೇಶ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಶ್ರೀ ಸುರೇಶ್ ಕುಮಾರ್ ಅವರು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಮೆಟ್ಟಿ ನಿಂತು ಈ ಸಾಧನೆ ಮಾಡಿರುವುದು ಕೇವಲ ಶ್ಲಾಘನೀಯ ಮತ್ತು ಸ್ಪೂರ್ತಿದಾಯಕ ಮಾತ್ರವಲ್ಲದೆ, ಅವರ ದೃಢಸಂಕಲ್ಪ ಮತ್ತು ಅಚಲ ಮನೋಬಲಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ.
ಇಂತಹ ಪ್ರಯತ್ನಗಳು ಇಡೀ ಸಮಾಜಕ್ಕೆ ದೈಹಿಕ ಸಾಮರ್ಥ್ಯ ಮತ್ತು ಛಲದ ಮಹತ್ವದ ಸಂದೇಶವನ್ನು ಸಾರುತ್ತವೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ವೈಯಕ್ತಿಕವಾಗಿ ಶ್ರೀ ಸುರೇಶ್ ಕುಮಾರ್ ಅವರೊಂದಿಗೆ ಮಾತನಾಡಿ, ಅವರ ಪ್ರಯತ್ನಕ್ಕಾಗಿ ಅಭಿನಂದಿಸಿದರು. ಈ ಪ್ರಯಾಣವನ್ನು ಸಾಧ್ಯವಾಗಿಸಿದ ಅವರ ಧೈರ್ಯ ಮತ್ತು ಪರಿಶ್ರಮವನ್ನು ಅವರು ಈ ಸಂದರ್ಭದಲ್ಲಿ ಪ್ರಶಂಸಿಸಿದರು.
ಈ ಕುರಿತು ಪ್ರತ್ಯೇಕ ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ.
ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ.
@nimmasuresh
https://timesofindia.indiatimes.com/city/bengaluru/age-illness-no-bar-at-70-bengaluru-legislator-pedals-702km-to-kanyakumari-in-five-days/articleshow/126258645.cms#
“ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ.
ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ.
@nimmasuresh
https://timesofindia.indiatimes.com/city/bengaluru/age-illness-no-bar-at-70-bengaluru-legislator-pedals-702km-to-kanyakumari-in-five-days/articleshow/126258645.cms#
*****
(रिलीज़ आईडी: 2210660)
आगंतुक पटल : 16