ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೃಢಸಂಕಲ್ಪ ಮತ್ತು ಇಚ್ಛಾಶಕ್ತಿಯ ಕುರಿತು ವಿವರಿಸುವ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 02 JAN 2026 9:43AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ವರ್ಷಕ್ಕೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಾ, ಪ್ರತಿಯೊಬ್ಬ ವ್ಯಕ್ತಿಯು ಮುಂದಿನ ದಿನಗಳಲ್ಲಿ ತಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಕಂಡುಕೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ದೃಢ ಸಂಕಲ್ಪ ಮತ್ತು ಇಚ್ಛಾಶಕ್ತಿಯಿಂದ ಹೊಸ ವರ್ಷದಲ್ಲಿ ಮಾಡಿದ ಸಂಕಲ್ಪಗಳನ್ನು ಈಡೇರಿಸಿಕೊಳ್ಳಬಹುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕಾಲಾತೀತ ವಿವೇಕವು ನಮ್ಮನ್ನು ಜಾಗೃತಗೊಳಿಸಲು, ಸದಾ ಎಚ್ಚರವಾಗಿರಲು ಮತ್ತು ಕಲ್ಯಾಣವನ್ನು ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತದೆ, ಅದೇ ವೇಳೆ ಭವಿಷ್ಯವನ್ನು ರೂಪಿಸಿಕೊಳ್ಳಲು ನಮ್ಮ ಮನಸ್ಸನ್ನು ದೃಢ ಮತ್ತು ನಿರ್ಭೀತವಾಗಿರಿಸಿಕೊಳ್ಳುತ್ತದೆ ಎಂದು ಪ್ರಧಾನಮಂತ್ರಿ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.  

ಶ್ರೀ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್‌ನಲ್ಲಿ ಸಂಸ್ಕೃತ ಶ್ಲೋಕದ ಮೂಲಕ ತಮ್ಮ ಸ್ಫೂರ್ತಿಯ ಸಂದೇಶವನ್ನು ಹಂಚಿಕೊಂಡು ಹೀಗೆ ಹೇಳಿದ್ದಾರೆ.

“मेरी कामना है कि आने वाले समय में आपको अपने हर प्रयास में सफलता मिले। दृढ़संकल्प और इच्छाशक्ति से नए साल में आपके संकल्प की सिद्धि हो।

उत्थातव्यं जागृतव्यं योक्तव्यं भूतिकर्मसु।

भविष्यतीत्येव मनः कृत्वा सततमव्यथैः।।”

 

*****

 

 


(रिलीज़ आईडी: 2210720) आगंतुक पटल : 14
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Bengali-TR , Punjabi , Gujarati , Odia , Tamil , Telugu , Malayalam