ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಮಹಿಳಾ ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಗಳ ಪ್ರವರ್ತಕರಾದ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ವಾರ್ಷಿಕೋತ್ಸವ ದಿನದಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗೌರವ ನಮನ ಸಲ್ಲಿಸಿದರು 


ಮಹಿಳೆಯರನ್ನು ಶಿಕ್ಷಣದ ಮೂಲಭೂತ ಹಕ್ಕಿನೊಂದಿಗೆ ಸಂಪರ್ಕಿಸುವ ಮೂಲಕ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕನ್ನು ನೀಡಿದರು

ಅವರು ಸಾಮಾಜಿಕ ದುಷ್ಕೃತ್ಯಗಳ ವಿರುದ್ಧ ಹೋರಾಡಿದರು, ಹುಡುಗಿಯರಿಗಾಗಿ ದೇಶದ ಮೊದಲ ಶಾಲೆಯನ್ನು ಸ್ಥಾಪಿಸಿದರು ಮತ್ತು ಸಾಮಾಜಿಕ ಸುಧಾರಣೆಯ ಜ್ವಾಲೆಯನ್ನು ಹೊತ್ತಿಸಿದರು

ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಸ್ಪೂರ್ತಿದಾಯಕ ಜೀವನವು ರಾಷ್ಟ್ರ ನಿರ್ಮಾಣದಲ್ಲಿ ಯಾವಾಗಲೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತದೆ

प्रविष्टि तिथि: 03 JAN 2026 11:31AM by PIB Bengaluru

ಮಹಿಳಾ ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಗಳ ಪ್ರವರ್ತಕರಾದ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗೌರವ ನಮನ ಸಲ್ಲಿಸಿದರು.

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು‘ಎಕ್ಸ್’ ತಾಣದ ಸಂದೇಶದಲ್ಲಿ, ಮಹಿಳೆಯರನ್ನು ಶಿಕ್ಷಣದ ಮೂಲಭೂತ ಹಕ್ಕಿನೊಂದಿಗೆ ಸಂಪರ್ಕಿಸುವ ಮೂಲಕ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕನ್ನು ನೀಡಿದರು ಎಂದು ಹೇಳಿದ್ದಾರೆ. ಅವರು ಸಾಮಾಜಿಕ ದುಷ್ಕೃತ್ಯಗಳ ವಿರುದ್ಧ ಹೋರಾಡಿದರು, ಹುಡುಗಿಯರಿಗಾಗಿ ದೇಶದ ಮೊದಲ ಶಾಲೆಯನ್ನು ಸ್ಥಾಪಿಸಿದರು ಮತ್ತು ಸಾಮಾಜಿಕ ಸುಧಾರಣೆಯ ಜ್ವಾಲೆಯನ್ನು ಹೊತ್ತಿಸಿದರು ಎಂದು ಅವರು ಹೇಳಿದರು. ಸಾವಿತ್ರಿಬಾಯಿ ಫುಲೆ ಅವರ ಸ್ಪೂರ್ತಿದಾಯಕ ಜೀವನವು ರಾಷ್ಟ್ರ ನಿರ್ಮಾಣದಲ್ಲಿ ಯಾವಾಗಲೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತದೆ.

 

*****


(रिलीज़ आईडी: 2211019) आगंतुक पटल : 15
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Tamil , Telugu , Malayalam