ಪ್ರಧಾನ ಮಂತ್ರಿಯವರ ಕಛೇರಿ
ವಾರಾಣಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಜನವರಿ 4 ರಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
ವಿವಿಧ ರಾಜ್ಯಗಳು ಮತ್ತು ಸಂಸ್ಥೆಗಳನ್ನು ಪ್ರತಿನಿಧಿಸುವ 58 ತಂಡಗಳ 1,000 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ
प्रविष्टि तिथि:
03 JAN 2026 2:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 4 ರಂದು ಮಧ್ಯಾಹ್ನ 12 ಗಂಟೆಗೆ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ವಾರಾಣಸಿಯ ಡಾ. ಸಂಪೂರ್ಣಾನಂದ ಕ್ರೀಡಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಭಾರತದಾದ್ಯಂತದ ವಿವಿಧ ರಾಜ್ಯಗಳು ಮತ್ತು ಸಂಸ್ಥೆಗಳನ್ನು ಪ್ರತಿನಿಧಿಸುವ 58 ತಂಡಗಳ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಜನವರಿ 4 ರಿಂದ 11 ರವರೆಗೆ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯು ಭಾರತೀಯ ವಾಲಿಬಾಲ್ ನಲ್ಲಿ ಉನ್ನತ ಮಟ್ಟದ ಸ್ಪರ್ಧೆ, ಕ್ರೀಡಾ ಮನೋಭಾವ ಮತ್ತು ಪ್ರತಿಭೆಯನ್ನು ಪ್ರದರ್ಶಿಸುವ ನಿರೀಕ್ಷೆಯಿದೆ.
ವಾರಾಣಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಆಯೋಜನೆಯಾಗಿರುವುದು ನಗರದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಬಲಪಡಿಸಲು ಹಾಗೂ ಕ್ರೀಡೆ ಮತ್ತು ಭೌತಿಕ ಚಟುವಟಿಕೆಗಳ ಸಾಮರ್ಥ್ಯ ವೃದ್ಧಿ (ಅಥ್ಲೆಟಿಕ್ ಡೆವಲಪ್ ಮೆಂಟ್) ಉತ್ತೇಜಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎಂಬುದರ ಸಂಕೇತವಾಗಿದೆ. ಮಹತ್ವದ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಆಯೋಜನೆ ವಿಸ್ತರಣೆಗೆ ಅನುಗುಣವಾಗಿ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳ ತಾಣವಾಗಿ ನಗರದ ಆಯ್ಕೆಯ ಸಾಧ್ಯತೆಯನ್ನು ಮತ್ತಷ್ಟು ಹೆಚ್ಚಿಸಲಿದೆ.
*****
(रिलीज़ आईडी: 2211147)
आगंतुक पटल : 10
इस विज्ञप्ति को इन भाषाओं में पढ़ें:
Assamese
,
Tamil
,
Gujarati
,
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Punjabi
,
Odia
,
Telugu
,
Malayalam