ಪ್ರಧಾನ ಮಂತ್ರಿಯವರ ಕಛೇರಿ
ಇಸ್ರೇಲ್ ಪ್ರಧಾನಮಂತ್ರಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
ಉಭಯ ನಾಯಕರು ಹೊಸ ವರ್ಷದ ಶುಭಾಶಯ ವಿನಿಮಯ ಮಾಡಿಕೊಂಡರು ಮತ್ತು ಜನತೆಯ ಶಾಂತಿ, ಸಮೃದ್ಧಿಗಾಗಿ ಹಾರೈಸಿದರು
ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಪರಸ್ಪರ ಸಮಾನ ಆದ್ಯತೆಗಳನ್ನು ಗುರುತಿಸಿದ ನಾಯಕರು
ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅವರು ಪುನರುಚ್ಚರಿಸಿದರು
ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದ ಪ್ರಧಾನಮಂತ್ರಿ ನೆತನ್ಯಾಹು
ಮಧ್ಯಪ್ರಾಚ್ಯ ಪ್ರದೇಶದಲ್ಲಿ ನ್ಯಾಯಯುತ ಮತ್ತು ದೀರ್ಘಕಾಲೀನ ಶಾಂತಿಯ ಪ್ರಯತ್ನಗಳಿಗೆ ಭಾರತದ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು
प्रविष्टि तिथि:
07 JAN 2026 3:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಉಭಯ ನಾಯಕರು ಪರಸ್ಪರ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನತೆಯ ಶಾಂತಿ ಮತ್ತು ಸಮೃದ್ಧಿಗಾಗಿ ಶುಭ ಹಾರೈಸಿದರು.
ಸಮಾನ ಪ್ರಜಾಪ್ರಭುತ್ವ ಮೌಲ್ಯಗಳು, ಪರಸ್ಪರ ಆಳವಾದ ನಂಬಿಕೆ ಮತ್ತು ದೂರದೃಷ್ಟಿಯ ಪ್ರೇರಣೆಯೊಂದಿಗೆ ಮುಂದಿನ ದಿನಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಮಾನ ಆದ್ಯತೆಗಳನ್ನು ಅವರು ಗುರುತಿಸಿದರು.
ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ಬಗ್ಗೆ ತಮ್ಮ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅವರು ಪುನರುಚ್ಚರಿಸಿದರು ಮತ್ತು ಈ ಪಿಡುಗಿನ ವಿರುದ್ಧ ಹೋರಾಡುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಪ್ರಧಾನಮಂತ್ರಿ ನೆತನ್ಯಾಹು ಅವರು ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಆ ಪ್ರದೇಶದಲ್ಲಿ ನ್ಯಾಯಯುತ ಮತ್ತು ದೀರ್ಘಕಾಲೀನ ಶಾಂತಿಯ ಪ್ರಯತ್ನಗಳಿಗೆ ಭಾರತದ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಪುನರುಚ್ಚರಿಸಿದರು.
ಪರಸ್ಪರ ಸಮಾನ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಉಭಯ ನಾಯಕರು ನಿರಂತರ ಸಂಪರ್ಕದಲ್ಲಿರಲು ಸಹಮತ ವ್ಯಕ್ತಪಡಿಸಿದರು.
*****
(रिलीज़ आईडी: 2212092)
आगंतुक पटल : 16
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam