ಪ್ರಧಾನ ಮಂತ್ರಿಯವರ ಕಛೇರಿ
ಜನವರಿ 12 ರಂದು ಪ್ರಧಾನಮಂತ್ರಿ ಅಹಮದಾಬಾದ್‌ನಲ್ಲಿ ಜರ್ಮನ್ ಚಾನ್ಸೆಲರ್ ಮೆರ್ಜ್ ಭೇಟಿ
ಉಭಯ ನಾಯಕರಿಂದ ಭಾರತ-ಜರ್ಮನಿ ಕಾರ್ಯತಂತ್ರಿಕ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿ ಪರಿಶೀಲನೆ
ಪ್ರಧಾನಮಂತ್ರಿ ಮೋದಿ ಮತ್ತು ಚಾನ್ಸೆಲರ್ ಮೆರ್ಜ್ ಸಬರಮತಿ ಆಶ್ರಮಕ್ಕೆ ಭೇಟಿ ಮತ್ತು ಅಹಮದಾಬಾದ್‌ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗಿ
प्रविष्टि तिथि:
09 JAN 2026 12:05PM by PIB Bengaluru
ಪ್ರಧಾನಮಂತ್ರಿ ಅವರು ಜನವರಿ 12 ರಂದು ಅಹಮದಾಬಾದ್‌ನಲ್ಲಿ ಜರ್ಮನಿಯ ಫೆಡರಲ್ ಚಾನ್ಸೆಲರ್ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜರ್ಮನಿಯ ಫೆಡರಲ್ ಚಾನ್ಸೆಲರ್ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರು 2026ರ ಜನವರಿ 12-13 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಚಾನ್ಸೆಲರ್ ಮೆರ್ಜ್ ಅವರ ಭಾರತದ ಮೊದಲ ಅಧಿಕೃತ ಭೇಟಿಯಾಗಿದೆ.
ಜನವರಿ 12 ರಂದು ಬೆಳಿಗ್ಗೆ 9:30ರ ಸುಮಾರಿಗೆ ಉಭಯ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಬೆಳಿಗ್ಗೆ 10 ಗಂಟೆ ಸುಮಾರಿಗೆ ಅವರು ಸಬರಮತಿ ನದಿ ದಂಡೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಆನಂತರ ಬೆಳಿಗ್ಗೆ 11:15 ರಿಂದ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ದ್ವಿಪಕ್ಷೀಯ ಮಾತುಕತೆ ಕಾರ್ಯಕ್ರಮಗಳು ನಡೆಯಲಿವೆ.
ಭಾರತ-ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆ ಇತ್ತೀಚೆಗೆ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಉಭಯ ನಾಯಕರು ಪರಿಶೀಲಿಸಲಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ, ಶಿಕ್ಷಣ, ಕೌಶಲ್ಯ ಮತ್ತು ಸರಕು ಸಾಗಾಣೆಯಲ್ಲಿ ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸುವ ಬಗ್ಗೆ ಮತ್ತು ರಕ್ಷಣೆ ಮತ್ತು ಭದ್ರತೆ, ವಿಜ್ಞಾನ, ನಾವೀನ್ಯತೆ ಮತ್ತು ಸಂಶೋಧನೆ, ಹಸಿರು ಮತ್ತು ಸುಸ್ಥಿರ ಅಭಿವೃದ್ಧಿ ಮತ್ತು ಜನರ ನಡುವಿನ ಸಂಬಂಧಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಹಯೋಗವನ್ನು ಮುಂದುವರಿಸುವ ಬಗ್ಗೆಯೂ ಅವರು ಚರ್ಚೆಯ ವೇಳೆ ಗಮನಹರಿಸಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚಾನ್ಸೆಲರ್ ಮೆರ್ಜ್ ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿದ್ಯಮಾನಗಳ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ ಮತ್ತು ಎರಡೂ ದೇಶಗಳ ವ್ಯಾಪಾರ ಮತ್ತು ಕೈಗಾರಿಕಾ ನಾಯಕರೊಂದಿಗೆ ಚರ್ಚೆ ನಡೆಸುವುದೂ ಸಹ ಒಳಗೊಂಡಿದೆ.
*****
(रिलीज़ आईडी: 2212886)
आगंतुक पटल : 9
इस विज्ञप्ति को इन भाषाओं में पढ़ें:
Bengali
,
Assamese
,
English
,
Urdu
,
Marathi
,
हिन्दी
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam