ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
प्रविष्टि तिथि:
09 JAN 2026 7:22PM by PIB Bengaluru
ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪಿಎಂಒ ಇಂಡಿಯಾ ಖ್ಯಾತೆಯಲ್ಲಿ ಈ ರೀತಿ ಹಂಚಿಕೊಳ್ಳಲಾಗಿದೆ:
"ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"
*****
(रिलीज़ आईडी: 2213166)
आगंतुक पटल : 4