ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಮಕರ ಸಂಕ್ರಾಂತಿಯ ಶುಭ ಸಂದರ್ಭವನ್ನು ವಿವರಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 14 JAN 2026 10:24AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಮಕರ ಸಂಕ್ರಾಂತಿಯು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಹಬ್ಬವಾಗಿದ್ದು, ಸಾಮರಸ್ಯ, ಸಮೃದ್ಧಿ ಮತ್ತು ಒಗ್ಗಟ್ಟಿನ ಮನೋಭಾವವನ್ನು ಸಂಕೇತಿಸುತ್ತದೆ ಎಂದು ಪ್ರಧಾನಮಂತ್ರಿ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಎಳ್ಳು ಮತ್ತು ಬೆಲ್ಲದ ಮಾಧುರ್ಯವು ಎಲ್ಲರ ಜೀವನದಲ್ಲಿ ಸಂತೋಷ ಮತ್ತು ಯಶಸ್ಸನ್ನು ತರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಷ್ಟ್ರದ ಕಲ್ಯಾಣಕ್ಕಾಗಿ ಸೂರ್ಯ ದೇವರ ಆಶೀರ್ವಾದವನ್ನು ಕೋರಿದ್ದಾರೆ.

ಶ್ರೀ ಮೋದಿ ಅವರು ಹಬ್ಬದ ಆಧ್ಯಾತ್ಮಿಕ ಮಹತ್ವವನ್ನು ಬಿಂಬಿಸುವ ಭಗವಾನ್ ಸೂರ್ಯನ ಆಶೀರ್ವಾದವನ್ನು ಕೋರುವ ಸಂಸ್ಕೃತ ಸುಭಾಷಿತವನ್ನು ಸಹ ಹಂಚಿಕೊಂಡಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಪ್ರತ್ಯೇಕ  X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“सभी देशवासियों को मकर संक्रांति की असीम शुभकामनाएं। तिल और गुड़ की मिठास से भरा भारतीय संस्कृति एवं परंपरा का यह दिव्य अवसर हर किसी के जीवन में प्रसन्नता, संपन्नता और सफलता लेकर आए। सूर्यदेव सबका कल्याण करें।”

“संक्रांति के इस पावन अवसर को देश के विभिन्न हिस्सों में स्थानीय रीति-रिवाजों के अनुसार मनाया जाता है। मैं सूर्यदेव से सबके सुख-सौभाग्य और उत्तम स्वास्थ्य की कामना करता हूं। 

सूर्यो देवो दिवं गच्छेत् मकरस्थो रविः प्रभुः। 

उत्तरायणे महापुण्यं सर्वपापप्रणाशनम्॥”

 

*****

 


(रिलीज़ आईडी: 2214406) आगंतुक पटल : 9
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Gujarati , Odia , Tamil , Malayalam