ಪ್ರಧಾನ ಮಂತ್ರಿಯವರ ಕಛೇರಿ
ಒಂಬತ್ತು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಘೋಷಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
14 JAN 2026 6:51PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೊಸ ಅಮೃತ್ ಭಾರತ್ ರೈಲುಗಳು ದೇಶಾದ್ಯಂತ ಪ್ರಯಾಣಿಕರ ಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ವಿವಿಧ ಮಾರ್ಗಗಳಲ್ಲಿಒಂಬತ್ತು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಕುರಿತು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಖಾತೆಯ ಸರಣಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು, ಈ ಉಪಕ್ರಮದ ವ್ಯಾಪಕ ಪ್ರಯೋಜನಗಳನ್ನು ಉಲ್ಲೇಖಿಸಿದ್ದಾರೆ.
ಹೊಸ ಅಮೃತ್ ಭಾರತ್ ರೈಲುಗಳು ಪ್ರಯಾಣಿಕರ ಅನುಭವ ಮತ್ತು ಸಂಪರ್ಕವನ್ನು ಹೆಚ್ಚಿಸುವುದರ ಜತೆಗೆ, ವಾಣಿಜ್ಯ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಪ್ರಧಾನಿ ಹೇಳಿದರು.
ದೇಶಾದ್ಯಂತ ಆಧುನಿಕ ಪ್ರಯಾಣಿಕರ ರೈಲುಗಳ ಜಾಲವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಒಂಬತ್ತು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಶೀಘ್ರದಲ್ಲೇ ಹಸಿರು ನಿಶಾನೆ ತೋರಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದರು.
ಹೊಸ ಸೇವೆಗಳು ಅಸ್ಸಾಂಅನ್ನು ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುತ್ತವೆ. ಆದರೆ ಅನೇಕ ಮಾರ್ಗಗಳು ಪಶ್ಚಿಮ ಬಂಗಾಳವನ್ನು ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ನವದೆಹಲಿ ಮತ್ತು ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುತ್ತವೆ, ಭಾರತದ ಪೂರ್ವ, ಉತ್ತರ, ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿಅಂತರರಾಜ್ಯ ರೈಲು ಸಂಪರ್ಕವನ್ನು ಗಮನಾರ್ಹವಾಗಿ ಬಲಪಡಿಸುತ್ತವೆ.
ಎಕ್ಸ್ ಖಾತೆಯ ಸರಣಿ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಹೀಗೆ ಹಂಚಿಕೊಂಡಿದ್ದಾರೆ;
‘‘ಹೊಸ ಅಮೃತ್ ಭಾರತ್ ರೈಲುಗಳು ಪ್ರಯಾಣಿಕರ ಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಾಣಿಜ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಇತರ ಪ್ರಯೋಜನಗಳೂ ಸೇರಿವೆ!’’
*****
(रिलीज़ आईडी: 2214762)
आगंतुक पटल : 2