ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಮೋಹನ್ ಲಾಲ್ ಮಿತ್ತಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
16 JAN 2026 7:18PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಮೋಹನ್ ಲಾಲ್ ಮಿತ್ತಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಶ್ರೀ ಮೋದಿ ಅವರು ಹೀಗೆ ಬರೆದುಕೊಂಡಿದ್ದಾರೆ:
“ಶ್ರೀ ಮೋಹನ್ ಲಾಲ್ ಮಿತ್ತಲ್ ಅವರು ಕೈಗಾರಿಕಾ ಜಗತ್ತಿನಲ್ಲಿ ತಮ್ಮನ್ನು ತಾವು ವಿಶಿಷ್ಠವಾಗಿ ಗುರುತಿಸಿಕೊಂಡಿದ್ದರು, ಅದರ ಜೊತೆಗೆ ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಬಹಳ ಉತ್ಸುಕರಾಗಿದ್ದರು. ವಿವಿಧ ಲೋಕೋಪಕಾರಿ ಕೆಲಸಗಳನ್ನು ಬೆಂಬಲಿಸುತ್ತಿದ್ದರು, ಸಾಮಾಜಿಕ ಪ್ರಗತಿಯ ಬಗ್ಗೆ ಅವರ ಉತ್ಸಾಹವನ್ನು ಪ್ರತಿಬಿಂಬಿಸುತ್ತಿದ್ದವು. ಅವರ ನಿಧನ ವಾರ್ತೆ ಕೇಳಿ ಬಹಳ ದುಃಖಿತನಾಗಿದ್ದೇನೆ. ನಾವು ಅನೇಕ ಸಂದರ್ಭಗಳಲ್ಲಿ ನಡೆಸಿದ ಮಾತುಕತೆಗಳನ್ನು ಸ್ಮರಿಸಿಕೊಳ್ಳಲು ಬಯಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.”
*****
(रिलीज़ आईडी: 2215754)
आगंतुक पटल : 7
इस विज्ञप्ति को इन भाषाओं में पढ़ें:
English
,
Gujarati
,
Urdu
,
हिन्दी
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Odia
,
Tamil
,
Telugu
,
Malayalam