ಪ್ರಧಾನ ಮಂತ್ರಿಯವರ ಕಛೇರಿ
ಪ್ರಯತ್ನದ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
19 JAN 2026 9:29AM by PIB Bengaluru
ಭಾರತೀಯ ಸಂಪ್ರದಾಯದ ಕಾಲಾತೀತ ಬುದ್ಧಿವಂತಿಕೆಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಜನತೆಗೆ ಸಂಸ್ಕೃತ ಸುಭಾಷಿತ ಮೂಲಕ ಸಲಹೆ ನೀಡಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ನಿರಂತರ ಪ್ರಯತ್ನ ಮತ್ತು ಪರಿಶ್ರಮದ ಮಹತ್ವವನ್ನು ಅವರು ಸಾರಿದ್ದಾರೆ,
ಪ್ರಯತ್ನವಿಲ್ಲದೆ, ಸಾಧಿಸಿದ್ದನ್ನು ಸಹ ಕಳೆದುಕೊಳ್ಳಬಹುದು ಮತ್ತು ಭವಿಷ್ಯದ ಅವಕಾಶಗಳು ಕೈತಪ್ಪಿ ಹೋಗುತ್ತವೆ ಎಂದು ಪ್ರಧಾನಮಂತ್ರಿ ಇಲ್ಲಿ ಉಲ್ಲೇಖಿಸಿದ್ದಾರೆ. ನಿರಂತರ ಪ್ರಯತ್ನದ ಮೂಲಕ, ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು ಮತ್ತು ಸಮೃದ್ಧಿಯನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಖಾತೆಯಲ್ಲಿ ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಿದ್ದಾರೆ;
“अनुत्थाने ध्रुवो नाशः प्राप्तस्यानागतस्य च।
प्राप्यते फलमुत्थानाल्लभते चार्थसम्पदम्॥”
*****
(रिलीज़ आईडी: 2216029)
आगंतुक पटल : 3