ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯುಎಇ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಬರಮಾಡಿಕೊಂಡ ಪ್ರಧಾನಮಂತ್ರಿ 

प्रविष्टि तिथि: 19 JAN 2026 5:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.

ಎಕ್ಸ್ ತಾಣದ ಸಂದೇಶದಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

"ನನ್ನ ಸಹೋದರ, ಯುಎಇ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಭಾರತ-ಯುಎಇ ನಡುವಿನ ಬಲವಾದ ಸ್ನೇಹಕ್ಕೆ ಅವರು ನೀಡುವ ಪ್ರಾಮುಖ್ಯತೆಯನ್ನು ಅವರ ಈ ಭೇಟಿಯು ವಿವರಿಸುತ್ತದೆ. ನಮ್ಮ ಚರ್ಚೆಗಳಿಗಾಗಿ ಪರಸ್ಪರ ಎದುರು ನೋಡುತ್ತಿದ್ದೇವೆ.

@MohamedBinZayed”

“‏توجهتُ إلى المطار لاستقبال أخي، صاحب السمو الشيخ محمد بن زايد آل نهيان، رئيس دولة الإمارات العربية المتحدة. تُجسّد زيارته الأهمية التي يوليها لعلاقات الصداقة المتينة بين الهند والإمارات. أتطلع إلى مباحثاتنا.

‏⁦‪@MohamedBinZayed

 

*****


(रिलीज़ आईडी: 2216190) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Gujarati , Odia , Telugu , Malayalam