ಪ್ರಧಾನ ಮಂತ್ರಿಯವರ ಕಛೇರಿ
ಮಣಿಪುರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
प्रविष्टि तिथि:
21 JAN 2026 9:24AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಸಹೋದರ ಸಹೋದರಿಯರಿಗೆ ಅವರ ರಾಜ್ಯೋತ್ಸವ ದಿನದ ಶುಭಾಶಯಗಳನ್ನು ಕೋರಿದ್ದಾರೆ.
ಮಣಿಪುರದ ಜನರು ತಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮದ ಮೂಲಕ ಭಾರತದ ಪ್ರಗತಿಯನ್ನು ಶ್ರೀಮಂತಗೊಳಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಕ್ರೀಡೆಗಳ ಬಗ್ಗೆ ರಾಜ್ಯದ ಉತ್ಸಾಹ, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಕೃತಿಯೊಂದಿಗಿನ ನಿಕಟ ಬಾಂಧವ್ಯ ನಿಜಕ್ಕೂ ಗಮನಾರ್ಹವಾಗಿದೆ ಎಂದು ಹೇಳಿದರು.
ಮಣಿಪುರ ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸ್ಥಿರವಾಗಿ ಮುಂದುವರಿಯುತ್ತದೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು.
ಎಕ್ಸ್ ತಾಣದ ಸಂದೇಶದಲ್ಲಿ; ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ;
“ಮಣಿಪುರ ರಾಜ್ಯೋತ್ಸವ ದಿನದಂದು, ರಾಜ್ಯದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ನಾನು ನನ್ನ ಆತ್ಮೀಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಣಿಪುರದ ಜನರು ಭಾರತದ ಪ್ರಗತಿಯನ್ನು ಶ್ರೀಮಂತಗೊಳಿಸುತ್ತಿದ್ದಾರೆ. ಕ್ರೀಡೆ, ಸಂಸ್ಕೃತಿ ಮತ್ತು ಪ್ರಕೃತಿಯ ಬಗ್ಗೆ ಈ ರಾಜ್ಯದ ಉತ್ಸಾಹ ಗಮನಾರ್ಹವಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯವು ಅಭಿವೃದ್ಧಿಯ ಹಾದಿಯಲ್ಲಿ ಮುಂದುವರಿಯಲಿ.”
*****
(रिलीज़ आईडी: 2216712)
आगंतुक पटल : 4
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam