ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಅವರು ಶುಭಾಶಯ ಕೋರಿದ್ದಾರೆ

प्रविष्टि तिथि: 21 JAN 2026 9:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನವಾದ ಇಂದು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಮೇಘಾಲಯದ ಜನರು ರಾಷ್ಟ್ರದ ಅಭಿವೃದ್ಧಿಗೆ ಬಲವಾದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಯವರು ಹೇಳಿದರು. ರಾಜ್ಯದ ಸಾಂಸ್ಕೃತಿಕ ಚೈತನ್ಯ ಮತ್ತು ರಮಣೀಯ ಸೌಂದರ್ಯವನ್ನು ದೇಶಾದ್ಯಂತ ವ್ಯಾಪಕವಾಗಿ ಮೆಚ್ಚಲಾಗುತ್ತದೆ ಎಂದು ಹೇಳಿದರು.

ಮೇಘಾಲಯವು ಭವಿಷ್ಯದಲ್ಲಿ ಅಭಿವೃದ್ಧಿಯ ಹೊಸ ಎತ್ತರವನ್ನು ಏರುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಮಂತ್ರಿ ಯವರು ವಿಶ್ವಾಸ ವ್ಯಕ್ತಪಡಿಸಿದರು.

ಎಕ್ಸ್ ತಾಣದ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ; 

“ಮೇಘಾಲಯದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮೇಘಾಲಯದ ಜನರು ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಬಲವಾದ ಕೊಡುಗೆಗಳನ್ನು ನೀಡಿದ್ದಾರೆ. ಮೇಘಾಲಯ ರಾಜ್ಯದ ಸಾಂಸ್ಕೃತಿಕ ಚೈತನ್ಯ ಮತ್ತು ರಮಣೀಯ ಸೌಂದರ್ಯವನ್ನು ವ್ಯಾಪಕವಾಗಿ ಮೆಚ್ಚಲಾಗುತ್ತದೆ. ಮೇಘಾಲಯವು ಭವಿಷ್ಯದಲ್ಲಿ ಅಭಿವೃದ್ಧಿಯ ಹೊಸ ಎತ್ತರವನ್ನು ಏರುತ್ತಲೇ ಇರಲಿ.”

 

*****


(रिलीज़ आईडी: 2216714) आगंतुक पटल : 3
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Punjabi , Gujarati , Odia , Tamil , Telugu , Malayalam