ಗೃಹ ವ್ಯವಹಾರಗಳ ಸಚಿವಾಲಯ
ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಿಗೆ ಅವುಗಳ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ರೋಮಾಂಚಕ ಸಂಸ್ಕೃತಿ ಮತ್ತು ಪ್ರತಿಭಾವಂತ ಜನರಿಂದ ಆಶೀರ್ವದಿಸಲ್ಪಟ್ಟಿರುವ ಮಣಿಪುರವು ಸದಾ ನಮ್ಮ ಹೆಮ್ಮೆಯಾಗಿದೆ
ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ಮುಟ್ಟುತ್ತಿರುವ ತ್ರಿಪುರಾ ಇಂದು ಭಾರತದ ಬೆಳವಣಿಗೆಗೆ ಹೆಮ್ಮೆಯ ಕೊಡುಗೆ ನೀಡುವ ಸಂಸ್ಥೆಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ
ಶ್ರೀಮಂತ ಜೀವವೈವಿಧ್ಯತೆಯ ತಾಣ ಮತ್ತು ಸಂಸ್ಕೃತಿಗಳು ಮತ್ತು ಆಚರಣೆಗಳ ಸಂಗಮವಾಗಿರುವ ಮೇಘಾಲಯವು ಭಾರತದ ಚೈತನ್ಯಕ್ಕೆ ಅಪಾರ ಶಕ್ತಿಯನ್ನು ನೀಡುತ್ತದೆ
प्रविष्टि तिथि:
21 JAN 2026 12:53PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಿಗೆ ಅವುಗಳ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದರು.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮ ಎಕ್ಸ್ ಪ್ಲಾಟ್ ಫಾರ್ಮ್ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ, "ಮಣಿಪುರದ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ರೋಮಾಂಚಕ ಸಂಸ್ಕೃತಿ ಮತ್ತು ಪ್ರತಿಭಾವಂತ ಜನರಿಂದ ಆಶೀರ್ವದಿಸಲ್ಪಟ್ಟಿರುವ ಮಣಿಪುರವು ಸದಾ ನಮ್ಮ ಹೆಮ್ಮೆಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯವು ಹೊಸ ಎತ್ತರವನ್ನು ತಲುಪಲಿ."
"ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದಂದು ಆ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳು. ಶ್ರೀಮಂತ ಜೀವವೈವಿಧ್ಯತೆಯ ತಾಣ ಮತ್ತು ಸಂಸ್ಕೃತಿಗಳು ಮತ್ತು ಆಚರಣೆಗಳ ಸಂಗಮವಾಗಿರುವ ಮೇಘಾಲಯವು ಭಾರತದ ಚೈತನ್ಯಕ್ಕೆ ಅಪಾರ ಶಕ್ತಿಯನ್ನು ನೀಡುತ್ತದೆ. ರಾಜ್ಯವು ಪ್ರಗತಿಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿ.
"ತ್ರಿಪುರಾದ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ಮುಟ್ಟುತ್ತಿರುವ ತ್ರಿಪುರಾ ಇಂದು ಭಾರತದ ಬೆಳವಣಿಗೆಗೆ ಹೆಮ್ಮೆಯ ಕೊಡುಗೆ ನೀಡುವ ಸಂಸ್ಥೆಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಮುಖ್ಯಮಂತ್ರಿ ಡಾ. ಮಾಣಿಕ್ ಸಹಾ ಅವರು ಮೋದಿ ಅವರ ನಾಯಕತ್ವದಲ್ಲಿ ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಮುಂದುವರಿಯಲಿ."
*****
(रिलीज़ आईडी: 2216836)
आगंतुक पटल : 13
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam